ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಮೈಸೂರು,ಜು.28:- ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಬೀದಿಗಿಳಿದರು.
ಸ್ವಪಕ್ಷದ ಸರ್ಕಾರದ ವಿರುದ್ಧವೇ ಬೀದಿಗಿಳಿದ ಮುಖಂಡರು ನಗರದ ಗಾಂಧಿ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ಪ್ರವೀಣ್ ನೆಟ್ಟಾರು ಶ್ರದ್ಧಾಂಜಲಿ ಫಲಕ ಹಿಡಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಿಜೆಪಿ ನಗರಾಧ್ಯಕ್ಷ ಟಿ.ಎಸ್. ಶ್ರೀವತ್ಸ ಮಾತನಾಡಿ ಹಲ್ಲೆ, ಹತ್ಯೆ ಮಾಡಿ ನಮ್ಮ ಧ್ವನಿ ಅಡಗಿಸಲು ಸಾಧ್ಯವಿಲ್ಲ. ಸರ್ಕಾರ ಇನ್ನಷ್ಟು ಚುರುಕಾಗಬೇಕು. ಹತ್ಯೆಗೂ ಮುನ್ನವೇ ಹಿಂದೂ ಕಾರ್ಯಕರ್ತರ ರಕ್ಷಣೆ ಮಾಡಬೇಕು. ಸಮಾಜ ದ್ರೋಹಿಗಳ ವಿರುದ್ಧ ಗಡಿಯಲ್ಲಿ ಕಟ್ಟೆಚ್ಚರ ವಹಿಸಬೇಕು. ನಮ್ಮದೇ ಮುಖ್ಯಮಂತ್ರಿ, ಗೃಹ ಮಂತ್ರಿಗಳು ದಕ್ಷ ಪೆÇಲೀಸ್ ಅಧಿಕಾರಿಗಳಿಗೆ ಸ್ವಾತಂತ್ರ್ಯ ಕೊಡಬೇಕು. ನಮ್ಮ ಕಾರ್ಯಕರ್ತರು ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆ ಮೂಲಕ ಅವರ ನೋವನ್ನು ವ್ಯಕ್ತ ಪಡಿಸಿದ್ದಾರೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ವಿಭಾಗೀಯ ಟಪ್ರಭಾರಿ ಮೈ.ವಿ.ರವಿಶಂಕರ್, ಮೇಯರ್ ಸುನಂದಾ ಪಾಲನೇತ್ರ, ಮುಖಂಡರಾದ ಶಿವಕುಮಾರ್, ಸಂದೇಶ್ ಸ್ವಾಮಿ, ಗಿರಿಧರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.