ಪ್ರವೀಣ್ ನೆಟ್ಟಾರು ಹತ್ಯೆ ಮರತೂರಕರ್ ಖಂಡನೆ

ಕಮಲಾಪೂರ:ಜು.30: ದಕ್ಷಿಣ ಕನ್ನಡ ಜಿಲ್ಲೆ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಘಟನೆಯನ್ನು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಯುವ ನಾಯಕನನ್ನು ಮಾರಕಾಸ್ತ್ರಗಳಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಹೇಯ ಕೃತ್ಯ ಎಲ್ಲರೂ ತಲೆ ತಗ್ಗಿಸುವ ವಿಚಾರ.ಸರಕಾರ ತಕ್ಷಣ ಆರೋಪಿಗಳನ್ನು ಬಂಧಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ಹಿಂದೂ ಕಾರ್ಯಕರ್ತರ ಮೇಲೆ ಪದೇ ಪದೆ ಹಲ್ಲೆ ಪ್ರಕರಣಗಳು ನಡೆಯುತ್ತಿರುವುದು ವಿಷಾಧಕರ ಸಂಗತಿ. ಈ ಹಿಂದೆ ಶಿವಮೊಗ್ಗದಲ್ಲಿ ನಡೆದ ಹರ್ಷನ ಕೊಲೆಯೇ ಹಿಂದೂಗಳ ಕೊನೆಯ ಕೊಲೆಯಾಗಲಿದೆ ಎಂದುಕೊಂಡಿದ್ದು ಸುಳ್ಳಾಗಿದ್ದು ಇದೀಗ ಪ್ರವಿ?ಣ ಹತ್ಯೆಯಾಗಿದೆ.ಪ್ರವೀಣ್ ಸಾವು ಸಮಾಜಕ್ಕೆ ತುಂಬಲಾರದ ನಷ್ಟ.ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ವಿಧಿಸಬೇಕು.ಮುಂದೆ ಇಂಥ ಘಟನೆಗಳು ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಜನ ಶಾಂತಿಪ್ರಿಯರು.ಜನ ಆವೇಶಕ್ಕೆ ಒಳಗಾಗದೇ ಶಾಂತಿ ಕಾಪಾಡಲು ಸಹಕರಿಸಬೇಕು ಎಂದು ಮರತೂರಕರ್ ಕಿವಿಮಾತು ಹೇಳಿದರು.