ಪ್ರವೀಣ್ ಸಿಬಿಐ ಜಂಟಿ ನಿರ್ದೇಶಕ

ನವದೆಹಲಿ,ನ.೫- ಕೇಂದ್ರೀಯ ತನಿಖಾ ದಳದ (ಸಿಬಿಐ) ಜಂಟಿ ನಿರ್ದೇಶಕರಾಗಿ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಸಿಐಡಿಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ನೇಮಕಗೊಂಡಿದ್ದಾರೆ.
ಐದು ವರ್ಷಗಳ ಅವಧಿಗೆ ಜಂಟಿ ನಿರ್ದೇಶಕರಾಗಿ ನೇಮಕವಾಗಿರುವ ಪ್ರವೀಣ್, ೨೦೦೩ರಿಂದ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ವಿವಿಧೆಡೆ ಸೇವೆ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಕೇಡರ್‌ನ ಪಿ. ಕೃಷ್ಣಕಾಂತ್ ಸಿಬಿಐ ಎಸ್‌ಪಿ ಆಗಿ ನೇಮಕಗೊಂಡಿದ್ದರು.
ಇನ್ನು ಕರ್ನಾಟಕದ ಡಿಜಿಪಿಯಾಗಿದ್ದ ಪ್ರವೀಣ್ ಸೂದ್ ಹಾಲಿ ಸಿಬಿಐನ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.