ಪ್ರವೀಣ್ ಹತ್ಯೆ ಮಾಡಿದ ಹಂತಕರನ್ನು ಕೂಡಲೇ ಬಂಧಿಸಿ: ಶ್ರೀರಾಮ ಸೇನೆ


ಸಂಜೆವಾಣಿ ವಾರ್ತೆ,
ಮರಿಯಮ್ಮನಹಳ್ಳಿ, ಜು.29: ಹಿಂದೂ ಕಾರ್ಯಕರ್ತರನ್ನ ಕೊಲೆ ಮಾಡಿದ ಆರೋಪಿಗಳನ್ನ ಕೂಡಲೇ ಬಂಧಿಸಿ ಎನ್ ಕೌಂಟರ್ ಮಾಡಬೇಕೆಂದು ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಲ್ ಹನುಮ ನಾಯ್ಕ್ ಆಗ್ರಹಿಸಿದರು.
ಅವರು ಮರಿಯಮ್ಮನಹಳ್ಳಿ ಪಟ್ಟಣದ  ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಗುರುವಾರ ಶ್ರೀರಾಮ‌ ಸೇನೆ ಹಾಗೂ ಹಿಂದೂ ಜಾಗರಣ ವೇದಿಕೆಯವರು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪ್ರವೀಣ್ ರಂತಹ ಹಿಂದೂ ಕಾರ್ಯಕರ್ತರನ್ನು ಸರಣಿಯವಾಗಿ ಹತ್ಯೆ ಮಾಡಲಾಗುತ್ತಿದ್ದು, ಹಿಂದೂ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ಇಲ್ಲವಾಗಿದೆ. ಅಲ್ಲದೇ ಪಕ್ಷದ ಕಾರ್ಯಕರ್ತರು ಭಯದ ದಿನಗಳನ್ನು ಕಳೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದರು. ಇಂದು ಬಿಜೆಪಿ ಸರ್ಕಾರ ಹಿಂದೂ ಧರ್ಮದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದರೂ ಕೊಲೆ ಮಾಡಿದವರನ್ನ ಬಂಧಿಸಿ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗುತ್ತಿದೆ ಎಂದು ಆರೋಪಿಸಿದರು. ಕೂಡಲೇ ರಾಜ್ಯದ ಬಿಜೆಪಿ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಜೊತೆಗೆ ಕೊಲೆ ಮಾಡಿದ ಆರೋಪಿಗಳಿಗೆ ಸೂಕ್ತ ಶಿಕ್ಷೆಗೆ ಒಳಪಡಿಸಬೇಕು ಇಲ್ಲವಾದರೆ ರಾಜೀನಾಮೆಯನ್ನು ಸಲ್ಲಿಸುವಂತೆ ಆಗ್ರಹಿಸಿದರು.
ನಂತರ ಮಾತನಾಡಿದ ಬಳ್ಳಾರಿ ಜಿಲ್ಲೆ ಹಿಂದೂ ಜಾಗರಣೆ ವೇದಿಕೆ ಸಂಯೋಜಕ ಮಹಾಂತೇಶ್ ನಾಯ್ಕ್,  ಪ್ರವೀಣ್‌ರ ಹತ್ಯೆಯು ಪೂರ್ವನಿರ್ಧಾರಿತ ಹತ್ಯೆಯಾಗಿದ್ದು ಅದನ್ನು ತೀವ್ರವಾಗಿ ಖಂಡಿಸುತ್ತೇವೆ. ನಮ್ಮ ಹಿಂದೂ ರಾಷ್ಟ್ರದಲ್ಲಿ ಹಿಂದುಗಳಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಸ್ತುತ ಬಿಜೆಪಿ ಸರ್ಕಾರ ಕೂಡಲೇ ರಾಜಿನಾಮೆ ನೀಡುವಂತೆ ಆಗ್ರಹಿಸಿದರು. ಅಲ್ಲದೇ ಪದೇ ಪದೇ ಹತ್ಯೆ ಕೃತ್ಯಗಳಲ್ಲಿ ಭಾಗಿಯಾಗುವವರನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶ್ರೀರಾಮ್ ಸೇನೆಯ ಜಿಲ್ಲಾ ಸಂಘಟಕ ಮಧುಕುಮಾರ್, ಎಂ ವೀರೇಶ್,  ಕೆ.ಮಂಜು, ಸುದೀಪ್, ಮಣಿ, ಚಿರಂಜೀವಿ, ಗುರು, ಅಣ್ಣಪ್ಪ, ಹರೀಶ್ ಹಾಗೂ ಇತರರು ಇದ್ದರು.

Attachments area