ಪ್ರವೀಣ ಹಂತಕರಿಗೆ ಉಗ್ರ ಶಿಕ್ಷೆ ವಿಧಿಸಲು ಆಗ್ರಹಿಸಿ ಮೌನಾಚರಣೆ

ಬೀದರ :ಜು.29: ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳದ ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತರ ಪ್ರವೀಣ ನೆಟ್ಟಾರುಗೆ ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ಮೇಣದ ಬತ್ತಿ ಬೆಳಗಿ ಶ್ರದ್ದಾಂಜಲಿ ಸಲ್ಲಿಸಿದರು. ಎರಡು ನಿಮಿಷ ಮೌನಚರಣೆ ನಡೆಸಲಾಯಿತು. ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದ ಚಂದ್ರಶೇಖರ ಪಾಟೀಲ ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆ PಈI ,SಆPI ಸಂಘಟನೆ ಇದೆ ಅನ್ನೋ ಅನುಮಾನ ಇದೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಜಿಹಾದಿ ಮನಸ್ಥಿತಿಯನ್ನು ಹುಟ್ಟ ಅಡಗಿಸಬೇಕು. ಹಿಂದೂಗಳ ಬೆನ್ನಿಗೆ ಸರ್ಕಾರ ನಿಲ್ಲಬೇಕು ಅಂತ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಸಮಾಜ ವಿರೋಧಿ ಮನಸ್ಥಿತಿಯಿರೋ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು ಅಂತ ಒತ್ತಾಯಿಸಿದ್ದಾರೆ.ಯಾವುದೇ ಸರಕಾರವಿದ್ದರೂ ಕೂಡ ಕಾರ್ಯಕರ್ತರಿಗೆ ನೋವಾಗಿದೆ. ಕೂಡಲೇ ಹಂತಕರು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಿಬೇಕು. ಈ ಸಂದರ್ಭದಲ್ಲಿ ಕಲಬುರ್ಗಿ ವಿಭಾಗದ ಪ್ರಭಾರಿ ಈಶ್ವರ್ ಸಿಂಗ್ ಠಾಕೂರ್ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ್ ನಗರ ಮಂಡಲ ಅಧ್ಯಕ್ಷರಾದ ಶಶಿಧರ ಹೊಸಳ್ಳಿ ಯವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಜನಾರ್ಧನ್ ರೆಡ್ಡಿ ಶಿವಕುಮಾರಸ್ವಾಮಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ರಾಕೇಶ್ ಪಾಟೀಲ್ ಕೈಲಾಸ ಕಾಜಿ ಜಿಲ್ಲಾ ಯುವ ಮೋರ್ಚ ಕಾರ್ಯದರ್ಶಿಗಳಾದ ವೀರಸ್ವಾಮಿ ಮಲ್ಲು ದೇಶಮುಕ ಸಂತೋಷ್ ಕಾಳೆ ಸಚಿನ್ ಪಾಟೀಲ್ ಅಜಯ್ ತುಂಬಕ್ಕೆ ವೆಂಕಟೇಶ್ವರ , ಸಂಗಮೇಶ ನೇಳಗೆ ಯುವ ಮೋರ್ಚಾದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.