ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ,ನ24: ಧಾರವಾಡ ಹಾಲು ಒಕ್ಕೂಟ ಮಹಾಮಂಡಳದ ಆವರಣದಲ್ಲಿ ಇತ್ತೀಚೆಗೆ ನಡೆದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ, ಹುಬ್ಬಳ್ಳಿಯ ಬಾಬಾಸಾಹೇಬ್ ಅಂಬೇಡ್ಕರ್ ಕೋ.ಆಪ್ ಕ್ರೆಡಿಟ್ ಸೊಸೈಟಿಗೆ 22ವರ್ಷಗಳ ಸಹಕಾರ ಕ್ಷೇತ್ರದಲ್ಲಿ ಮಾಡಿದ ಕಾರ್ಯ ಸಾಧನೆಯನ್ನು ಪರಿಗಣಿಸಿ ಅತ್ಯುತ್ತಮ ಸಹಕಾರ ಸಂಘ ಎಂದು ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಘದ ನಿರ್ದೇಶಕರಾದ ಎ.ಬಿ. ಹೊಸಮನಿ ಮತ್ತು ಸಿಇಒ ಬಸವರಾಜ ಬಸಲಿಂಗಗೋಳ ಅವರು ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಕೆ.ಎ.ಮುರಾರಿ, ಸಲಹೆಗಾರರಾದ ಬಿ.ಎಫ್. ಕಾಳೆ, ಟಿ.ಟಿ. ದೊಡ್ಡಮನಿ ಇತರರು ಇದ್ದರು. ಸಂಘದ ಅಧ್ಯಕ್ಷರು, ಶಾಸಕರಾದ ಪ್ರಸಾದ ಅಬ್ಬಯ್ಯ ಅವರು ಸಂಘದ ಸಾಧನೆಗೆ ಶ್ರಮಿಸಿದ ಆಡಳಿತ ಮಂಡಳಿ ಕಾರ್ಯವನ್ನು ಶ್ಲಾಘಿಸಿದ್ದಾರೆ.