ಪ್ರಶಿಕ್ಷಣ ವರ್ಗದ ಕಾರ್ಯಕ್ರಮ ಉದ್ಘಾಟನೆ

ಗಂಗಾವತಿ ನ. 12 : ನಗರದ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ಬುಧವಾರ ಗಂಗಾವತಿ ವಿಧಾನಸಭೆ ಕ್ಷೇತ್ರದ ಪ್ರಶಿಕ್ಷಣ ವರ್ಗದ ಕಾರ್ಯಕ್ರಮ ನಡೆಯಿತು.

ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಪಕ್ಷ ಬಲಿಷ್ಠವಾಗಿದೆ ಎಂದರು.

ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಕ್ಷೇತ್ರದ ಪ್ರತಿಯೊಂದು ಮನೆ ಮನೆಗೆ ತೆರಳಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು. ಪಕ್ಷ ಸಂಘಟನೆ ಎಲ್ಲರೂ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪ್ರಶಿಕ್ಷಣ ವರ್ಗದ ಸಂಚಾಲಕ ಪ್ರಭು ಕಪಗಲ್, ಸಹ ಸಂಚಾಲಕ ವೀರೇಶ ಬಲಕುಂದಿ, ಮಾಜಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ,
ಎಪಿಎಂಸಿ ಮಾಜಿ ಅಧ್ಯಕ್ಷ
ತಿಪ್ಪೇರುದ್ರಸ್ವಾಮಿ, ನಗರ ಮಂಡಲದ ಅಧ್ಯಕ್ಷ ಕಾಶಿನಾಥ ಚಿತ್ರಗಾರ, ಗ್ರಾಮೀಣ ಮಂಡಲ ಅಧ್ಯಕ್ಷ ಚನ್ನಪ್ಪ ಮಳಗಿ ವಕೀಲರು, ನಗರ ಹಾಗೂ ಗ್ರಾಮೀಣ ಪ್ರಶಿಕ್ಷಣ ವರ್ಗ ಸಂಚಾಲಕರು, ಸಹ ಸಂಚಾಲಕರು, ಜಿಲ್ಲಾ ಪದಾಧಿಕಾರಿಗಳು, ಹಾಗೂ ಪ್ರಶಿಕ್ಷಣಾರ್ಥಿಗಳು ಇದ್ದರು.