ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿ.ಹೆಚ್.ಓ ಬೇಟಿ.ಪರಿಶೀಲನೆ

ರಾಯಚೂರು,ಜು.೨೫- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುರೇಂದ್ರಬಾಬು ಅವರು ಉಡುಮಗಲ್ ಖಾನಾಪುರ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಡಿರ್ ಬೇಟಿ ನೀಡಿ ಪರಿಶೀಲಿಸಿದರು.
ಅರೋಗ್ಯ ಕೇಂದ್ರದಲ್ಲಿ ವೈದ್ಯಧಿಕಾರಿಗಳು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು, ಮಾನ್ಯರು ಆರೋಗ್ಯ ಕೇಂದ್ರವನ್ನು ಪರಿಶೀಲನೆ ಮಾಡಿ ಲ್ಯಾಬ್ ಗೆ ಬೇಕಾಗುವ ಸಾಮಗ್ರಿಗಳು ಖರೀದಿಸಲು ವೈದ್ಯಾಧಿಕಾರಿಗಳಿಗೆ ಹೇಳಿದರು ಮತ್ತು ಆರೋಗ್ಯ ಕೇಂದ್ರದ ಒಳಗಡೆ ಸಬ್ ಸ್ಟೋರ್ ಸ್ವಚ್ಚವಾಗಿ ಇಡಲು ಹೇಳಿದರು ನಂತರ ಆಶಾ ಕಾರ್ಯಕರ್ತೆಯರಿಗೆ ವಿವಿಧ ರಾಷ್ಟ್ರೀಯ ಕಾರ್ಯಕ್ರಗಳಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಹೇಳಿದರು.