ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ್ ಖಾತೆ ಸಚಿವರ ಪ್ರವಾಸ

ಕಲಬುರಗಿ,ನ.13: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ್ ಖಾತೆ ಸಚಿವ ಬಿ.ಸಿ.ನಾಗೇಶ ಅವರು ಗದಗ ಜಿಲ್ಲೆಯಿಂದ ರೈಲು ಮೂಲಕ ಇದೇ ನವೆಂಬರ್ 14 ರಂದು ಬೆಳಿಗ್ಗೆ 6 ಗಂಟೆಗೆ ಕಲಬುರಗಿಗೆ ಅಗಮಿಸುವರು.
ಅಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ತಾಲೂಕಿನ ಮಡಿಯಾಳ ತಾಂಡಾ ಸರ್ಕಾರಿ ಬಾಲಕೀಯರ ಪ್ರೌಢ ಶಾಲೆಯಲ್ಲಿ ವಿವೇಕ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು.