ಪ್ರಾಥಮಿಕ ಹಂತದಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಿರಲಿ: ಡಾ.ಸದಾನಂದ ಪೆರ್ಲ

ಬೀದರ:ಮಾ.17:ಪ್ರಾಥಮಿಕ ಶಾಲೆಯ ಹಂತದಲ್ಲಾದರೂ ಮಕ್ಕಳಿಗೆ ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಸಿದಲ್ಲಿ ಕನ್ನಡ ಉಳಿಯಲು ಸಾಧ್ಯವಿದೆ ಎಂದು ಕಲಬುರಗಿ ಆಕಾಶವಾಣಿ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲಾ ಅವರು ತಿಳಿಸಿದರು.ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆದ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಅವರು ಮಾನತಾಡಿದರು.ಕನ್ನಡ ಶಾಲೆಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಅವುಗಳ ಸಂಖ್ಯೆ ಇನ್ನಷ್ಟು ಹೆಚ್ಚಬೇಕು. ಈ ದಿಶೆಯಲ್ಲಿ ಜನರನ್ನು ಚಿಂತನೆಗೆ ಒಳಪಡಿಸುವುದು ಮತ್ತು ಕನ್ನಡದ ಮೇಲೆ ಪ್ರೀತಿ ಮೂಡಿಸುವ ಕೆಲಸವನ್ನು ಕನ್ನಡ ಸಮ್ಮೇಳನಗಳಿಂದಾಗಬೇಕು ಎಂದರು.ಭಾಲ್ಕಿ ಹಿರೇಮಠ ಸಂಸ್ಥಾನದ ಪೂಜ್ಯ ಗುರುಬಸವ ಪಟ್ಟದೇವರು ಮಾತನಾಡಿ, ಕನ್ನಡ ಭಾಷೆಯ ಬೆಳವಣಿಗೆಯ ಕುರಿತು ಎಲ್ಲರೂ ಚಿಂತಿಸಬೇಕಾಗಿದೆ. ಮನೆ ಮತ್ತು ಹೊರಗಡೆ ಸಾಧ್ಯವಾದಷ್ಟು ಕನ್ನಡ ಭಾಷೆಯಲ್ಲಿಯೇ ಮಾತನಾಡಲು ಪ್ರಯತ್ನಿಸಬೇಕು ಎಂದು ಹೇಳಿದರು.ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬು ವಾಲಿ ಮಾತನಾಡಿ, 20ನೇ ಸಾಹಿತ್ಯ ಸಮ್ಮೆಳನದಲ್ಲಿ ಹಲವು ಹೊಸತುಗಳ ಮೂಲಕ ದಾಖಲೆಗಳನ್ನು ಮಾಡಲಾಗಿದೆ ಎಂದು ಹೇಳಿದರು.
ಸಮ್ಮೇಳನಾಧ್ಯಕ್ಷರಾದ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಅವರು ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡಿದರು. ಮಾಜಿ ಶಾಸಕರಾದ ಅಶೋಕ ಖೇಣಿ, ಮುಖಂಡರಾದ ಸೂರ್ಯಕಾಂತ ನಾಗಮಾರಪಳ್ಳಿ, ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ, ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ, ಬಸವಕೇಂದ್ರ ಟ್ರಸ್ಟ್ ಅಧ್ಯಕ್ಷ ಪ್ರಭುರಾವ ವಸಮತೆ, ಕರಾವೈಸಂ ಪರಿಷತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಬುರಾವ ದಾನಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವಕುಮಾರ ಕಟ್ಟೆ, ಟಿ.ಎಂ ಮಚ್ಚೆ, ಕೋಶಾಧ್ಯಕ್ಷ ಶಿವಶಂಕರ ಟೋಕರೆ, ಮುಖಂಡರಾದ ಪ್ರಕಾಶ ಟೊಣ್ಣೆ, ಹಾವಶೆಟ್ಟಿ ಪಾಟೀಲ, ಚಿಟ್ಟಾ ಗ್ರಾಪಂ ಅಧ್ಯಕ್ಷ ರಮೇಶ ಬಿರಾದಾರ, ಕಸಾಪ ತಾಲ್ಲೂಕು ಅಧ್ಯಕ್ಷ ಎಂ.ಎಸ್ ಮನೋಹರ್, ಸಿದ್ಧಲಿಂಗ ಚಿಂಚೋಳಿ, ರಮೇಶ ಚಿದ್ರಿ, ಶಾಲಿವಾನ ಉದಗೀರೆ, ಸಚಿನ್ ಮಠಪತಿ, ವಿಜಯಕುಮಾರ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು. ನವರಸ ಕಲಾಲೋಕದ ಅಧ್ಯಕ್ಷ ವೈಜಿನಾಥ ಸಜ್ಜನಶೆಟ್ಟಿ, ರಾಘು ಪ್ರಿಯಾ ಅವರು ಹಾಸ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.