ಪ್ರಾಮಾಣಿಕ ಕರ್ತವ್ಯ ಪ್ರಜ್ಞೆಯಿಂದ ವೃತ್ತಿಯಲ್ಲಿ ಯಶಸ್ಸು

ಚಿತ್ರದುರ್ಗ.ಏ.೩೦: ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಿದಾಗ ನಮ್ಮ ವೃತ್ತಿಯಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು. ನಗರದ ಡಯಟ್‌ನಲ್ಲಿ  ನಿವೃತ್ತ ಉಪನ್ಯಾಸಕ ಕೆ.ಎಂ.ನಾಗರಾಜು ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಮಾಣಿಕತೆ, ಸಮರ್ಪಣಾಭಾವದಿಂದ ಕೆಲಸ ಮಾಡಿದರೆ ಸಮಾಜದಲ್ಲಿ ಗೌರವ ದೊರೆಯುತ್ತದೆ. ಶಿಸ್ತು, ಸಮಯಪಾಲನೆಯಿಂದ ತಮಗೆ ವಹಿಸಿದ ಅಧ್ಯಯನ ಕಾರ್ಯ, ಶೈಕ್ಷಣಿಕ ಕಾರ್ಯಕ್ರಮಗಳು, ತರಬೇತಿಗಳನ್ನು ಯಶಸ್ವಿಯಾಗಿ ನಾಗರಾಜು ನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು. ನಿವೃತ್ತ ಉಪನ್ಯಾಸಕ ಕೆ.ಎಂ.ನಾಗರಾಜು ಮಾತನಾಡಿ, ಹಿರಿಯೂರು ತಾಲೂಕಿನ ಪಾಲವ್ವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹಶಿಕ್ಷಕನಾಗಿ, ವೇಣುಕಲ್ಲು ಗುಡ್ಡ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ನಂತರ 11 ವರ್ಷಗಳ ಕಾಲ ಡಯಟ್‌ನಲ್ಲಿ ಕೆಲಸ ನಿರ್ವಹಿಸಿರುವುದು ನನಗೆ ತೃಪ್ತಿ ತಂದಿದೆ. ಕೌಟುಂಬಿಕ ವಾತಾವರಣವಿದ್ದಲ್ಲಿ ಉತ್ತಮವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ವೃತ್ತಿ ಜೀವನದಲ್ಲಿ ಸಹಕಾರ ನೀಡಿದ ಪ್ರಾಚಾರ್ಯರು, ಅಧಿಕಾರಿ ವರ್ಗದವರಿಗೂ ಸಹಕಾರ ನೀಡಿದ ಕಚೇರಿ ಸಿಬ್ಬಂದಿ ವರ್ಗದವರಿಗೆ ಅಭಿನಂದನೆ ಸಲ್ಲಿಸಿದರು.ಉಪ ಪ್ರಾಚಾರ್ಯ ಡಿ.ಆರ್.ಕೃಷ್ಣಮೂರ್ತಿ, ಹಿರಿಯ ಉಪನ್ಯಾಸಕರಾದ ಹಾಲಮೂರ್ತಿ, ಎಸ್.ಸಿ.ಪ್ರಸಾದ್, ಉಪನ್ಯಾಸಕರಾದ ಎಸ್,ಬಸವರಾಜು, ಕೆ.ಜಿ.ಪ್ರಶಾಂತ್, ವಿ.ಕನಕಮ್ಮ, ನಿತ್ಯಾನಂದ, ಸಿ.ಎಸ್.ಲೀಲಾವತಿ, ಎನ್.ಮಂಜುನಾಥ್, ತಾಂತ್ರಿಕ ಸಹಾಯಕರಾದ ಕೆ.ಆರ್.ಲೋಕೇಶ್, ಆರ್.ಲಿಂಗರಾಜು ಕಚೇರಿ ಅಧೀಕ್ಷಕರಾದ ದೇವೇಂದ್ರಪ್ಪ, ಗೀತಾ, ಕವಿತಾ, ಸಹಾಯಕ ಸಾಂಖಿಕ ಅಧಿಕಾರಿ ರೂಪಾ, ಪ್ರಥಮ ದರ್ಜೆ ಸಹಾಯಕರಾದ ಮಹೇಂದ್ರ, ಮಂಜುನಾಥ್, ದ್ವಿತೀಯ ದರ್ಜೆ ಸಹಾಯಕರಾದ ಸೌಭಾಗ್ಯಮ್ಮ, ವನಜಾಕ್ಷಮ್ಮ, ನಿರ್ಮಲಾ ಕಂಪ್ಯೂಟರ್ ಆಪರೇಟರ್ ಮಮತಾ ಮತ್ತಿತರರಿದ್ದರು.