ಚಿತ್ತಾಪುರ:ಜೂ.11: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್, ಐಟಿ ಬಿಟಿ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಭಿನಂದನಾ ಸಮಾರಂಭ ಇಂದು ಸಂಜೆ 4ಕ್ಕೆ ನಡೆಯಲಿದೆ ಎಂದು ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್ ಕರದಾಳ ತಿಳಿಸಿದ್ದಾರೆ.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಾಹ್ನ 3ಕ್ಕೆ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪ್ರಿಯಾಂಕ್ ಖರ್ಗೆ ಆಗಮಿಸುವರು. ಅಲ್ಲಿ ಅದ್ದೂರಿಯಾಗಿ ಸ್ವಾಗತಿಸಿಕೊಂಡು ಸನ್ಮಾನಿಸಲಾಗುವುದು. ನಂತರ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ತೆರೆದ ವಾಹನದಲ್ಲಿ ಪಟ್ಟಣದ ನಾಗಾವಿ ಚೌಕ್, ಭುವನೇಶ್ವರಿ ಚೌಕ್, ಅಂಬೇಡ್ಕರ್ ಸರ್ಕಲ್, ಬಸ್ ನಿಲ್ದಾಣ ಹಾಗೂ ಬಜಾಜ್ ಕಲ್ಯಾಣ ಮಂಟಪದವರೆಗೆ ಭವ್ಯ ಮೆರವಣಿಗೆ ನಡೆಯಲಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಹಾಗೂ ಕಾಂಗ್ರೆಸ್ ಪಕ್ಷದವತಿಯಿಂದ ಅಭಿನಂದನಾ ಸಮಾರಂಭ ನಡೆಯಲಿದೆ. ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮುಖಂಡರು ಆಗಮಿಸಲಿದ್ದಾರೆ ಎಂದರು.
ಸುದ್ದಿಗೋಷ್ಟಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಪಂ ಸದಸ್ಯರಾದ ಶಿವಾನಂದ ಪಾಟೀಲ್, ಅರವಿಂದ್ ಚವ್ಹಾಣ, ಶ್ರೀವಾಸ ಸಗರ್, ಮಾಜಿ ಪುರಸಭೆ ಅಧ್ಯಕ್ಷರಾದ ಚಂದ್ರಶೇಖರ್ ಕಾಶಿ, ಮಲ್ಲಿಕಾರ್ಜುನ್ ಕಾಳಗಿ, ಶೀಲಾ.ಕಾಶಿ, ಮುಕ್ತ ಪಟೇಲ್, ಮನ್ಸೂರ್ ಪಟೇಲ್, ಸ್ವಪ್ನ ಪಾಟೀಲ್, ಸಂಜಯ್ ಬುಳಕ, ಹಣಮಂತ ಪೂಜಾರಿ ಬೆಂಕಿ, ಬಸಣ್ಣ ತಳವಾರ ಸೇರಿ ಇತರರಿದ್ದರು.