ಪ್ರಿಯಾಂಕ್ ಖರ್ಗೆ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ:ಬೆಣ್ಣೂರಕರ್

ಚಿತ್ತಾಪುರ: ನ.15:ತಾಲೂಕಿನ ವಾಡಿ ಪಟ್ಟಣದಲ್ಲಿ ಪುರಸಭೆ ವತಿಯಿಂದ ನಡೆದ ವಿವಿಧ ಅಭಿವೃದ್ದಿ ಅಡಿಗಲ್ಲು ಸಮಾರಂಭದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ ನಾವು ಮನಸ್ಸು ಮಾಡಿದ್ದರೆ ಒಬ್ಬ ಬಿಜೆಪಿ ಲೀಡರ್ ಚಿತ್ತಾಪುರದಲ್ಲಿ ಅಷ್ಟೇ ಅಲ್ಲ ಕಲಬುರಗಿ ಜಿಲ್ಲೆಯಲ್ಲಿ ಓಡಾಡುವುದಿಲ್ಲ ಆ ರೀತಿ ಮಾಡುತ್ತೇನೆ ಎಂಬ ಹೇಳಿಕೆ ನೀಡುವ ಮೂಲಕ ಸರ್ಕಾರದ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್ ಹೇಳಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಡಿ ಪಟ್ಟಣದಲ್ಲಿ ನಡೆದ ಸರಕಾರಿ ಕಾರ್ಯಕ್ರಮದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ರಾಜಕೀಯ ಭಾಷಣ ಮಾಡುವ ಮೂಲಕ ಸರಕಾರದ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಗ್ಯಯುತ ಟೀಕೆ ಟಿಪ್ಪಣೆ ಮಾಡಲಿ ಆದರೆ ನಾಲಿಗೆ ಹರಿಬಿಟ್ಟು ಮಾತನಾಡುವ ಮೂಲಕ ಚಿತ್ತಾಪುರ ಕ್ಷೇತ್ರದ ರಾಜಕೀಯಕ್ಕೆ ಕಳಂಕ ತರುವ ಕೆಲಸ ಮಾಡಿದ್ದಾರೆ ಎಂದರು.

ಪ್ರತಿ ಕಾರ್ಯಕ್ರಮದಲ್ಲಿ ಪ್ರಬುದ್ದ ಸಮಾಜ ಮತ್ತು ಸಮೃದ್ದ ಸಮಾಜ ನಿರ್ಮಾಣ ಮಾಡಬೇಕು ಎಂದು ಹೇಳುವ ಶಾಸಕರು, ಇದೇನಾ ನಿಮ್ಮ ಪ್ರಬುದ್ದ ರಾಜಕಾರಣ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಒಬ್ಬ ಲೀಡರ್ ರಸ್ತೆಯಲ್ಲಿ ಓಡಾಡುವಂತಿಲ್ಲ ಹಾಗೆ ಮಾಡುತ್ತೇನೆ ಎಂದು ಹೇಳುವ ಮೂಲಕ ಕ್ಷೇತ್ರದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಪ್ರಚೋದನಾತ್ಮಕವಾಗಿದ್ದು ಸಮಾಜದಲ್ಲಿ ಅಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ದಕ್ಕೆ ತಂದಂತಾಗಿದೆ. ಆದ್ದರಿಂದ ಕೂಡಲೇ ಇವರ ಮೇಲೆ ಪೆÇಲೀಸ್ ಇಲಾಖೆ ಸ್ಪಯಂ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಚಿತ್ತಾಪುರ ಕ್ಷೇತ್ರವು ಜಿಲ್ಲೆಯಲ್ಲಿಯೇ ಶಾಂತಿಗೆ ಹೆಸರಾದ ತಾಲೂಕಾಗಿದೆ, ಇಲ್ಲಿವರೆಗೆ ಶಾಂತಿಗೆ ಭಂಗ ತರುವ ಕೆಲಸಗಳು ಯಾವ ರಾಜಕಾರಣಿಗಳು ಮಾಡಿಲ್ಲ, ಮತ್ತು ದ್ವೇಷದ ರಾಜಕಾರಣ ಮಾಡಿಲ, ಆದರೆ ಈಗ ಕ್ಷೇತ್ರದಲ್ಲಿ ಬೇರೆಯವರು ಮುಗ್ದ ಜನರಲ್ಲಿ ದ್ವೇಷದ ಬೀಜಗಳು ಬಿತ್ತಿ ರಾಜಕೀಯ ವಾತಾವರಣ ಕಲುಷಿತಗೊಳಿಸುತ್ತಿರುವ ಅವರ ನಡೆ ಖಂಡನಾರ್ಹವಾಗಿದೆ ಹಾಗೂ ಅಂತಹವರಿಗೆ ಮತದಾರರ ಮುಂಬರುವ ಚುನಾವಣೆಯಲ್ಲಿ ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಹೇಳಿದರು.

ಶಾಸಕ ಪ್ರಿಯಾಂಕ್ ಖರ್ಗೆ ಅವರ ಮಾತುಗಳಿಂದ ಬಿಜೆಪಿ ಕಾರ್ಯಕರ್ತರಾರು ಭಯ ಪಡುವ ಅವಶ್ಯಕತೆಯಿಲ್ಲ, ದೈರ್ಯದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿ ನಿಮ್ಮ ಹಿಂದೆ ಪಕ್ಷದ ನಾಯಕರು ಇದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರುವುದು ಶತಸಿದ್ದ ಹೀಗಾಗಿ ಪ್ರಿಯಾಂಕ್ ಖರ್ಗೆ ಸೋಲುವ ಬೀತಿಯಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು.