
ಸಂಜೆವಾಣಿ ವಾರ್ತೆ
ದಾವಣಗೆರೆ.ಜು.11; ನಗರದ ನಿಜಲಿಂಗಪ್ಪ ಬಡಾವಣೆಯ ಶ್ರೀಮತಿ ಗಂಗೂಬಾಯಿ ಹಾನಗಲ್ ಉದ್ಯಾನವನದಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರವು ಯಶಸ್ವಿಯಾಗಿ ನಡೆಯಿತು.ಪ್ರೀತಿ ಆರೈಕೆ ಟ್ರಸ್ಟ್, ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ದಾವಣಗೆರೆಯ ವಿವಿಧ ಉದ್ಯಾನವನಗಳಲ್ಲಿ ಪ್ರತಿ ಭಾನುವಾರ ಮುಂಜಾನೆ ಆರೋಗ್ಯದ ಉಚಿತ ತಪಾಸಣೆ ಶಿಬಿರಗಳನ್ನು ಆಯೋಜನೆ ಮಾಡಲಾಗುತ್ತಿದೆ.ಪ್ರೀತಿ ಆರೈಕೆ ಟ್ರಸ್ಟ್ ಅಧ್ಯಕ್ಷರು, ಮಾಜಿ ಶಾಸಕರಾದ ಗುರುಸಿದ್ಧನಗೌಡ, ಆರೈಕೆ ಆಸ್ಪತ್ರೆ ಮುಖ್ಯಸ್ಥರು, ಪ್ರೀತಿ ಆರೈಕೆ ಟ್ರಸ್ಟ್ ಕಾರ್ಯದರ್ಶಿ ಡಾ. ರವಿಕುಮಾರ್ ಟಿ.ಜಿ, ಅರವಿಂದ್, ಪ್ರವೀಣ್ ಪಾಟೀಲ್, ನಾಗರಾಜಸ್ವಾಮಿ, ನುಂಕೇಶ್, ಶ್ವೇತಾ ಬಿ.ಎಂ ಸೇರಿದಂತೆ ಟ್ರಸ್ಟ್ ಸದಸ್ಯರು ತಪಾಸಣೆ ಶಿಬಿರದಲ್ಲಿ ಭಾಗಿಯಾಗಿದ್ದರು.