ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದಿಂದ ಗಣೇಶ್‌ಶೆಣೈಗೆ ಸನ್ಮಾನ

ಸಂಜೆವಾಣಿ ವಾರ್ತೆ

ದಾವಣಗೆರೆ, ಜು.೭;ದಾವಣಗೆರೆಯ ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದ ಆಶ್ರಯದಲ್ಲಿ ಇತ್ತೀಚಿಗೆ ನಗರದ ಮೊದಲನೇ ಮುಖ್ಯ ರಸ್ತೆಯಲ್ಲಿರುವ ಶ್ರೀಮತಿ ಗೌರಮ್ಮ ನರಹರಿಶೇಟ್ ಸಭಾ ಭವನದಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ “ಶಾರದಾ ಪುರಸ್ಕಾರ” ರಾಜ್ಯ ಪ್ರಶಸ್ತಿ ಸಮಾರಂಭದಲ್ಲಿ ಈ ಕಾರ್ಯಕ್ರಮದ ಪರಿಪೂರ್ಣ ಪರಿಕಲ್ಪನೆ, ಆಯೋಜನೆ, ಕಟ್ಟುಕಟ್ಟಾಗಿ, ವ್ಯವಸ್ಥಿತವಾಗಿ ನಿರೂಪಣೆಯೊಂದಿಗೆ ಸಂಭ್ರಮದ ಯಶಸ್ವಿಯಾಗಿ ನಡೆಸಿಕೊಟ್ಟ ಕಲಾಕುಂಚ ಸೇರಿದಂತೆ ವಿವಿಧ ಸಂಘಟನೆಗಳ ರೂವಾರಿಗಳಾದ ಸಾಲಿಗ್ರಾಮ ಗಣೇಶ್‌ಶೆಣೈಯವರನ್ನು ಸನ್ಮಾನಿಸಿ ಗೌರವಿಸಲಾಯಿತು ಎಂದು ಪ್ರತಿಷ್ಠಾನದ ನಿರ್ದೇಶಕರಾದ ನಲ್ಲೂರು ಲಕ್ಷö್ಮಣ್‌ರಾವ್ ತಿಳಿಸಿದ್ದಾರೆ.ವಾಣಿಜ್ಯ ನಗರಿ ದಾವಣಗೆರೆಯನ್ನು ಸಾಂಸ್ಕೃತಿಕ ನಗರಿಯಾಗಿ ಪರಿವರ್ತಿಸುವ ಹಂತದಲ್ಲಿ ಕಳೆದ ನಾಲ್ಕು ದಶಕಗಳಿಂದ ಕಠಿಣಪರಿಶ್ರಮ ಕ್ರಿಯಾಶೀಲ ವ್ಯಕ್ತಿಯಾದ ಶೆಣೈಯವರನ್ನು ಸನ್ಮಾನಿಸಿದ ವೇದಿಕೆಯಲ್ಲಿ ಅಖಿಲ ಭಾರತ ದೈವಜ್ಞ ಸಮಾಜದ ಅಧ್ಯಕ್ಷರಾದ ದಿನಕರ ಶಂಕರ ಬೈಕೇರಿಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರಿನ ಘಟಕದ ಅಧ್ಯಕ್ಷರಾದ ಡಾ.ಮಂಜುನಾಥ್ ಎಸ್.ರೇವಣಕರ್, ದಾವಣಗೆರೆ ದೈವಜ್ಞ ಸಮಾಜದ ನೂತನ ಅಧ್ಯಕ್ಷರಾದ ಪ್ರಶಾಂತ ವಿಶ್ವನಾಥ್ ವರ್ಣೇಕರ್, ಪ್ರತಿಷ್ಥಾನದ ಸಂಸ್ಥಾಪಕರಾದ ಡಾ. ನಲ್ಲೂರು ಅರುಣಾಚಲ ಎನ್.ರೇವಣಕರ್, ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೇಮಾ ಅರುಣಾಚಲ ಎನ್.ರೇವಣಕರ್ ಮುಂತಾದವರು ಉಪಸ್ಥಿತರಿದ್ದು ಶೆಣೈಯವರಿಗೆ ಕೃತಜ್ಞತೆ ಸಲ್ಲಿಸಿದರು.