ಪ್ರೇಮಿಗಳ ದಿನಕ್ಕೆ ಫಾರ್ ರಿಜಿಸ್ಟ್ರೇಷನ್

ಪೃಥ್ವಿ ಅಂಬರ್ ಮತ್ತು ಮಿಲನಾ ನಾಗರಾಜ್ ಜೋಡಿಯಾಗಿ ಕಾಣಿಸಿಕೊಂಡಿರುವ ” ಫಾರ್ ರಿಜಿಸ್ಟಗರೇಷನ್ ” ಪ್ರೇಮಿಗಳ ದಿನಕ್ಕೆ ತೆರೆಗೆ ಬರಲಿದೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ಮುಂದಿನ ವರ್ಷ ಫೆಬ್ರವರಿ 10 ರಂದು ಚಿತ್ರ ತೆರೆಗೆ ಬರಲಿದೆ. ನಿರ್ಮಾಪಕ ನವೀನ್ ರಾವ್  ಹಾಗೂ  ನಿರ್ದೇಶಕ ನವೀನ್ ದ್ವಾರಕನಾಥ್  ಈ ವಿಷಯ ಖಚಿತ ಪಡಿಸಿದ್ದಾರೆ.

ನಿರ್ದೇಶಕ ನವೀನ್ ದ್ವಾರಕನಾಥ್ ಮಾಹಿತಿ ನೀಡಿ,  ದಿಯಾ” ಹಾಗೂ “ಲವ್ ಮಾಕ್ಟೇಲ್” ಸಿನಿಮಾಗಳು ಯಶಸ್ವಿಯಾಗಿದ್ದವು. ಹೀಗಾಗಿ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿ ಅಂತ ನಿರ್ಧರಿಸಲಾಯಿತು.ಚಿತ್ರ ಆರಂಭವಾಗಿ ಈಗ ಬಿಡುಗಡೆ ಹಂತಕ್ಕೆ ತಲುಪಿದೆ ಎಲ್ಲರ ಪ್ರೋತ್ಸಾಹವಿರಲಿ ಎಂದರು

ನಿರ್ಮಾಪಕ ನವೀನ್ ರಾವ್. ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದಾಗ ನನಗೆ ಅನಿಸಿದ್ದು, ನಿರ್ಮಾಪಕ ಹಣ ಒದಗಿಸಿಕೊಡತ್ತಾನೆ.‌ ಆದರೆ ಇಡೀ ತಂಡ ಚಿತ್ರಕ್ಕಾಗಿ ಎಷ್ಟು ಕಷ್ಟ ಪಡುತ್ತದೆ ಎಂದು.  ಅವರೆಲ್ಲರ ಶ್ರಮದಿಂದ ಉತ್ತಮ ಚಿತ್ರವೊಂದು ನಿರ್ಮಾಣವಾಗಿದೆ ಎಂದರು.

ನಾಯಕ ಪೃಥ್ವಿ ಅಂಬರ್. ಮಂಗಳೂರಿನಲ್ಲಿ ನಿರ್ದೇಶಕರು  ಚಿತ್ರದ ಕಥೆ ಹೇಳಿದರು. ಇಷ್ಟವಾಯಿತು. ಎಲ್ಲದ್ದಕ್ಕೂ ರಿಜಿಸ್ಟ್ರೇಷನ್ ಕಡ್ಡಾಯ. ನಾವು ಪ್ರೀತಿಗೂ ರಿಜಿಸ್ಟ್ರೇಷನ್ ಕಡ್ಡಾಯವಾದರೆ ಹೇಗೆ ಎಂಬುದನ್ನು ತೋರಿಸಿದ್ದೇವೆ ಎನ್ನುತ್ತಾರೆ.

ನಾಯಕಿ ಮಿಲನ ನಾಗರಾಜ್ ಮಾತನಾಡಿ ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ಮಾಡಿದ್ದು ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಫೆಬ್ರವರಿ ತಿಂಗಳು ನನಗೆ ಲಕ್ಕಿ. ಈ ಚಿತ್ರ ಕೂಡ ಅದೇ ತಿಂಗಳಲ್ಲಿ ತೆರೆಗೆ ಬರುತ್ತಿರುವುದು ಮತ್ತಷ್ಟು ಖುಷಿಯಾಗಿದೆ ಎಂದರು. ಸಂಗೀತ ನಿರ್ದೇಶಕ ಹರೀಶ್ ಹಾಗೂ ಕಾರ್ಯಕಾರಿ ನಿರ್ಮಾಪಕ ನಿರಂಜನ್ ಗೋಷ್ಠಿಯಲ್ಲಿದ್ದರು.

ಚಿತ್ರದಲ್ಲಿ ಪೃಥ್ವಿ ಅಂಬರ್, ಮಿಲನ‌ ನಾಗರಾಜ್, ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಮತ್ತಿತರಿದ್ದಾರೆ.