ಪ್ರೇಮ ಪ್ರಕರಣ: ಸುಟ್ಟುಗಾಯಗೊಂಡಿದ್ದ ಯುವಕ ಸಾವು

ಮುದ್ದೇಬಿಹಾಳ,ಜೂ 10: ಪ್ರೇಮ ಪ್ರಕರಣ ಹಿನ್ನೆಲೆಯಲ್ಲಿ ಪಟ್ಟಣದ ರಾವಜಪ್ಪ ಮದರಿ ಅವರ ಮನೆಯಲ್ಲಿ ಮೇ 26 ರಂದು ಸಂಜೆ ಪೆಟ್ರೋಲ್ ಎರಚಿ ಕೊಲೆಗೆ ಯತ್ನಿಸಿದ ಘಟನೆಯಲ್ಲಿ ಶೇ 70 ರಷ್ಟು ಬೆಂದು ಹೋಗಿದ್ದ ಪ್ರಿಯಕರ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ಗ್ರಾಮದ ರಾಹುಲ್ ರಾಮನಗೌಡ ಬಿರಾದಾರ (25) ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 12-13 ದಿನಗಳ ನಂತರ ರವಿವಾರ ಸಂಜೆ 4 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾನೆ ಎಂದು ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ ಖಚಿತಪಡಿಸಿದ್ದಾರೆ.
ಈ ಹಿಂದೆ ರಾಹುಲ್ ಬಿರಾದಾರ ಮದರಿ ಕುಟುಂಬದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಎರಡು ಮೂರು ವರ್ಷಗಳ ನಂತರ ಪ್ರೀತಿ ಮುರಿದುಬಿದ್ದರಿಂದ ಯುವತಿ ರಾಹುಲನಿಂದ ದೂರವಾಗಿದ್ದಳು.
ಇದನ್ನು ಸಹಿಸದ ರಾಹುಲ್ ಮೇ 26 ರಂದು ಯುವತಿಯ ಮನೆಗೆ ಏಕಾಂಗಿಯಾಗಿ ಬಂದಿದ್ದಾಗ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದಲಾಗಿದೆ ಎಂದು ಅಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದರು. ಅಂದು ನಡೆದ ಘಟನೆಯ ಪರಿಣಾಮ ಯುವತಿಯ ಚಿಕ್ಕಪ್ಪ ಮುತ್ತು ಮದರಿ, ಕೆಲಸಗಾರ ವಾಲಿಕಾರ ಕೂಡ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯುವತಿಯ ಚಿಕ್ಕಮ್ಮ ಮುತ್ತು ಅವರ ಪತ್ನಿ ಸೀಮಾ ಸಕಾಲಿಕ ಚಿಕಿತ್ಸೆಯ ನಂತರ ಚೇತರಿಸಿಕೊಂಡಿದ್ದಾರೆ.
ಈ ಕುರಿತು ಮುದ್ದೇಬಿಹಾಳ ಪೆÇಲೀಸ್ ಠಾಣೆಯಲ್ಲಿ ಪ್ರಿಯಕರ ಮತ್ತು ಪ್ರಿಯತಮೆ ಎರಡು ಕುಡುಂಬದವರ ಕಡೆಯಿಂದ ದೂರು, ಪ್ರತಿ ದೂರು ದಾಖಲಾಗಿದ್ದು ಇರುತ್ತದೆ . ಯುವತಿಯ ತಂದೆಯನ್ನು ಪೆÇಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.