
ದಾವಣಗೆರೆ.ಮೇ.22; ಪ್ರೇರಣಾ ಸಾಂಸ್ಕೃತಿಕ ಸಂಸ್ಥೆ ವತಿಯಿಂದ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 65 ರಿಂದ 100 ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರೇರಣಾ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.ವಿದ್ಯಾರ್ಥಿಗಳು ತಮ್ಮ ಅಂಕ ಪಟ್ಟಿ ಪ್ರತಿ, ಆಧಾರ್ ಪ್ರತಿ ಮತ್ತು 3 ಭಾವ ಚಿತ್ರದೊಂದಿಗೆ ನಗರದ ಹೊಂಡದ ವೃತ್ತದ ಬಳಿಯಿರುವ ಸಂಸ್ಥೆಯಲ್ಲಿ ಹೆಸರನ್ನು ನೊಂದಾಯಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜೂನ್ 1 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮೊ: 9731289333 ಮತ್ತು 9731424099 ಸಂಪರ್ಕಿಸುವಂತೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಚೇತನ ಶಿವಕುಮಾರ್ ತಿಳಿಸಿದ್ದಾರೆ.