ಪ್ರೊ. ಸಿದ್ದುಗೆ ರಾಷ್ಟ್ರೀಯ ಬಸವ ಪ್ರಶಸ್ತಿ

ವಿಜಯಪುರ:ಮೇ.21:ನಗರದÀ ಬಾಲಿಕೆಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿರಿಯ ಕನ್ನಡ ಉಪನ್ಯಾಸಕ ಪೆÇ್ರ. ಸಿದ್ದು ಸಾವಳಸಂಗ ಅವರಿಗೆ 2024 ನೇ ಸಾಲಿನ “ರಾಷ್ಟ್ರೀಯ ಬಸವ ಪ್ರಶಸ್ತಿ” ಪ್ರದಾನ ಮಾಡಲಾಯಿತು.
ಮೇ 19 ರಂದು ಚೇತನ ಫೌಂಡೇಶನ್ ಕರ್ನಾಟಕ ವತಿಯಿಂದ ಧಾರವಾಡದ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ನಡೆದ ‘ವಚನ ವೈಭವ’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು. ಚೇತನ ಫೌಂಡೇಶನ್ ಅಧ್ಯಕ್ಷÀ ಚಂದ್ರಶೇಖರ ಮಾಡಲಗೇರಿ ಹಾಗೂ ಮತ್ತಿತರರಿದ್ದರು.