ಪ್ರೌಢಶಾಲಾ ಶಿಕ್ಷಕರಿಗೆ ವರ್ಕ್ ಫ್ರಮ್ ಹೋಮ್ -ನಮೋಶಿ ಮನವಿ

ಕಲಬುರಗಿ,ಮೇ.30-ಲಾಕ್ ಡೌನ್ ಮುಗಿಯುವವರೆಗೆ ಪ್ರೌಢ ಶಾಲೆಗಳ ಶಿಕ್ಷಕರಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಮುಂದುವರಿಸಿ ಈ ಕೂಡಲೇ ಆದೇಶ ಹೊರಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ ಜಿ.ನಮೋಶಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ರಾಜ್ಯದ ಸರಕಾರಿ ಹಾಗೂ ಅನುದಾನಿತ ಪ್ರೌಢ ಶಾಲೆಗಳಿಗೆ ಕೋವಿಡ್-19 ಕಾರಣದಿಂದ ಮೇ.24 ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಲಾಗಿತ್ತು. ತದನಂತರ ರಾಜ್ಯ ಸರ್ಕಾರ ಜೂ.7ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದರಿಂದ ಶಿಕ್ಷಕರು ಶಾಲೆಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಲಾಕ್ ಡೌನ್ ಮುಗಿಯುವವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಮುಂದುವರೆಸಿ ಕೂಡಲೇ ಆದೇಶ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.