ಪ್ಲಾಸ್ಟಿಕ್ ರಾಷ್ಟ್ರದ್ವಜ ನಿಷೇಧಕ್ಕೆ ಒತ್ತಾಯ

ರಾಯಚೂರು,ಆ.೧೧-
ಪ್ಲಾಸ್ಟಿಕ್ ರಾಷ್ಟ್ರಧ್ವಜವನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸಮತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ರಾಷ್ಟ್ರೀಯ ಹಬ್ಬದ ಸಮಯದಲ್ಲಿ ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟ್ಟಲು ನ್ಯಾಯಾಲಯದ ಆದೇಶದಂತೆ ಮತ್ತು ಕೇಂದ್ರ ಸರಕಾರದ ಪ್ಲಾಸ್ಟಿಕ್ ನಿಷೇಧದ ನಿರ್ಧಾರದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಆಗ್ರಹಿಸಿದರು. ರಾಷ್ಟ್ರಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆಗಸ್ಟ್ ೧೫ ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ, ಅದೇ ಕಾಗದದ ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ. ಆದ್ದರಿಂದ ಅನೇಕ ದಿನಗಳವರೆಗೆ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ಪ್ಲಾಸ್ಟಿಕ್ ರಾಷ್ಟ್ರ ದ್ವಜ
ನಿಷೇಧಕ್ಕೆ ನ್ಯಾಯಾಲಯ ತೀರ್ಪು ಹಾಗೂ ಕಾನೂನು ಇದ್ದರೂ ಸರಕಾರದಿಂದ ಯೋಗ್ಯ ರೀತಿಯಲ್ಲಿ ಅದರ ಪಾಲನೆಯಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ರಾಷ್ಟ್ರಧ್ವಜದ ಈ ಅವಮಾನವನ್ನು ತಡೆಯಲು ಹಿಂದೂ ಜನಜಾಗೃತಿ ಸಮಿತಿಯು ಮುಂಬೈ ಉಚ್ಚ ನ್ಯಾಯಾಲಯದಲ್ಲ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸಲ್ಲಿಸಿತ್ತು. ಈ ಕುರಿತು ವಿಚಾರಣೆ ನಡೆಸಿದಾಗ, ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜದ ಅಪಮಾನವನ್ನು ನಿಲ್ಲಸುವಂತೆ ನ್ಯಾಯಾಲಯವು ಸರಕಾರಕ್ಕೆ ಆದೇಶ ನೀಡಿತ್ತು. ಅದರಂತೆ ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆಗಳು ಮತ್ತು ಶಿಕ್ಷಣ ಇಲಾಖೆಗಳು ಈ ಸಂಬಂಧ ಸುತ್ತೋಲೆಯನ್ನೂ ಹೊರಡಿಸಿದ್ದವು. ಇದರೊಂದಿಗೆ ಕೇಂದ್ರ ಸರಕಾರವೂ ಪ್ಲಾಸ್ಟಿಕ್ ನಿಷೇಧಿಸಲು ನಿರ್ಧರಿಸಿದೆ. ಅದರ ಪ್ರಕಾರವೂ ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ಮಾಡುವುದು ಸಂವಿಧಾನಬಾಹಿರವಾಗಿದೆ. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ತಡೆಗಟ್ಟುವಂತೆ ಒತ್ತಾಯಿಸಿದರು.
ನ್ಯಾಯಾಲಯದ ಆದೇಶದ ಪ್ರಕಾರ, ರಾಷ್ಟ್ರಧ್ವಜದ ಅಪಾವಿತ್ರ್ಯವನ್ನು ತಡೆಯಲು ಸರಕಾರವು ಕಾರ್ಯಕಾರಿ ಸಮಿತಿಯನ್ನು ರಚಿಸಬೇಕು. ಅದರಲ್ಲಿ ಹಿಂದೂ ಜನಜಾಗೃತಿ ಸಮಿತಿಯನ್ನೂ ಸೇರಿಸಬೇಕು. ದೇಶಸೇವೆಗೆ ಸಮಿತಿ ಸಿದ್ಧವಾಗಿದೆ.
ಜಿಲ್ಲೆಯಲ್ಲಿ ಎಲ್ಲಯೂ ಪ್ಲಾಸ್ಟಿಕ್ ರಾಷ್ಟ್ರಧ್ವಜ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದರೆ ಕೂಡಲೇ ಸಂಬಂಧಪಟ್ಟ ಉತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿದ್ಯಾಲಯಗಳುರಾಷ್ಟ್ರಧ್ವಜವನ್ನು ಗೌರವಿಸಿರಿ ಈ ವಿಷಯದ ಕುರಿತು ಉಪನ್ಯಾಸ ಮತ್ತು ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲು ಸಮಿತಿಗೆ ಅನುಮತಿ ನೀಡಿ,ನಾಗರಿಕರಲ್ಲಿ ಜಾಗೃತಿ ಮೂಡಿಸಲು ಸಮಿತಿಯು ರಾಷ್ಟ್ರಧ್ವಜವನ್ನು ಗೌರವಿಸಿರಿ ಈ ವಿಶೇಷ ಏಡಿಯೋ ಅನ್ನು ಮಾಡಿದೆ. ಈ ವಿಡಿಯೋ ಅನ್ನು ತೋರಿಸಲು ಕೇಬಲ್ ವಾಹಿನಿಗಳಗೆ ಅನುಮತಿಸಬೇಕು.
ಈ ಸಂದರ್ಭದಲ್ಲಿ ಕೃಷ್ಣವೇಣಿ, ಶೋಭಾ ಶರಣಬಸವ, ಸೇರಿದಂತೆ ಉಪಸ್ಥಿತರಿದ್ದರು.