ಪ.ಜಾ.ಪ.ಪಂ ವಿದ್ಯಾರ್ಥಿಗಳಿಗೆ ಪ್ರೀಶಿಫ್ ಕಾರ್ಡ್ ಯೋಜನೆ ಜಾರಿ!!!

ದುರಗಪ್ಪ ಹೊಸಮನಿ
ಲಿಂಗಸುಗೂರು.ನ.೧೦-ಕರ್ನಾಟಕ ಸರ್ಕಾರದ ಹೊಸ ಯೋಜನೆ ಪ್ರೀಶಿಪ್ ಕಾರ್ಡ್ ಯೋಜನೆ ಹೆಸರಿನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವರ್ಗದ ವಿದ್ಯಾರ್ಥಿಗಳಿಗೆ ಈ ಯೋಜನೆ ಜಾರಿಗೆ ತರುವ ಮೂಲಕ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿ ಬೆಳೆದು ಇಂತಹಾ ಯೋಜನೆಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಸಿಕ್ಕಂತಾಗುತ್ತದೆ ಪ್ರೀಶಿಪ್ ಕಾರ್ಡ್ ಯೋಜನೆಯಿಂದ ಒಂದನೇ ತರಗತಿಯಿಂದಲೇ ಡಿಗ್ರಿ ಕಾಲೇಜು ಓದುವ ವಿದ್ಯಾರ್ಥಿಗಳಿಗೆ ಮತ್ತು ಇದಕ್ಕಿಂತ ಹೆಚ್ಚಿನ ಉನ್ನತ ಶಿಕ್ಷಣ ಮಾಡುವ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಮೂಲಕ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಸಚಿವರು ಪರಿಶಿಷ್ಟ ಪಂಗಡದ ವರ್ಗದ ಸಚಿವರು ಈ ಎರಡು ಇಲಾಖೆಯ ಆಯುಕ್ತರು ಆದೇಶ ಮಾರ್ಗಸೂಚಿ ಹೊರಡಿಸಿದೆ.
ಇದರಿಂದಾಗಿ ರಾಜ್ಯಾದ್ಯಂತ ಇರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವರ್ಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸರ್ಕಾರ ತಂದಿರುವ ನೂತನ ಪ್ರೀಶಿಪ್ ಕಾರ್ಡ್ ಯೋಜನೆ ಜಾರಿಗೆ ತಂದಿರುವ ವಿದ್ಯಾರ್ಥಿಗಳು ಇದರ ಸದುಪಯೋಗ ಪ್ರಯೋಜನ ಪಡೆಯಬಹುದು ಎಂಬುದನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಪರಿಶಿಷ್ಟ ಪಂಗಡದ ವರ್ಗದ ಸಚಿವರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಯೋಜನೆ ಜಾರಿಗೆ ತಂದಿದ್ದಾರೆ ಎಂದು ತಾಲೂಕಿನ ಪರಿಶಿಷ್ಟ ಪಂಗಡದ ವರ್ಗದ ಇಲಾಖೆ ಮ್ಯಾನೇಜರ್ ರವಿಕುಮಾರ್ ಹಟ್ಟಿ ಹಾಗೂ ಪರಿಶಿಷ್ಟ ಜಾತಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಎಂ.ರವರು ಜಂಟಿಯಾಗಿ ಇಂದು ಬೆಳಗ್ಗೆ ಸಂಜೆ ವಾಣಿ ಪತ್ರಿಕೆ ವರದಿಗಾರರಿಗೆ ತಿಳಿಸಿದ್ದಾರೆ.
ಪ್ರೀಶಿಪ್ ಕಾರ್ಡ್ ಉಪಯೊಗ ಏನು?
ಪ್ರೀಶಿಪ್ ಕಾರ್ಡ್ ಡೌನ್ ಲೋಡ್ ಮಾಡಿಕೊಂಡು ನಂತರ ತಾವು ಪ್ರವೇಶ ಪಡೆಯುವ ಕಾಲೇಜುಗೆ ಹೊಗಿ ಈ ಕಾರ್ಡ್‌ನ್ನು ತೋರಿಸಿ ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಪ್ರವೇಶಪಡೆಯಬಹುದು. ಹಾಗೂ ಪ್ರವೇಶ ಪಡೆದ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿ ವ್ಯವಸ್ಥಾಪಕರು ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರವೇಶ ನಿರಾಕರಿಸುವಂತಿಲ್ಲ ಸರ್ಕಾರದ ಆದೇಶ ಮಾರ್ಗಸೂಚಿ ಪ್ರಕಾರ ಪ್ರತಿಯೊಬ್ಬ ವಿದ್ಯಾರ್ಥಿಯೂ ಪ್ರೀಶಿಪ್ ಕಾರ್ಡ್ ಶಾಲಾ ಕಾಲೇಜು ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು ಎಂದು ಇಂತಹ ಯೋಜನೆಗಳನ್ನು ಅನುಷ್ಠಾನ ಮಾಡುವ ಮುಖಾಂತರ ಸರ್ಕಾರ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮೂಲಕ ಬಡ ವಿದ್ಯಾರ್ಥಿಗಳಿಗೆ ಆಶಾಕಿರಣಗಿದೆ.
ತಾಲ್ಲೂಕಿನ ಬಹುತೇಕ ಕಾಲೇಜುಗಳಿಗೆ ಪರಿಶಿಷ್ಟ ಪಂಗಡದ ವರ್ಗದ ಇಲಾಖೆ ಮ್ಯಾನೇಜರ್ ರವಿಕುಮಾರ್ ಹಟ್ಟಿ ಹಾಗೂ ಪರಿಶಿಷ್ಟ ಜಾತಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಎಂ ರವರು ತಾಲ್ಲೂಕಿನ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಮತ್ತು ಶಾಲಾ ಕಾಲೇಜು ಆಡಳಿತ ಮಂಡಳಿ ವ್ಯವಸ್ಥಾಪಕರಿಗೆ ಸರ್ಕಾರ ನೂತನವಾಗಿ ಅಸ್ಥಿತ್ವಕ್ಕೆ ತಂದಿರುವ ಪ್ರೀಶಿಪ್ ಕಾರ್ಡ್ ಯೋಜನೆ ಬಗ್ಗೆ ಮಾಹಿತಿ ನಿಡಲು ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ .
ವಿದ್ಯಾರ್ಥಿಗಳು ಶುಲ್ಕ ಕಟ್ಟದೆ ಪ್ರವೇಶ ಪಡೆಯಬಹುದು ಮತ್ತು ವಿದ್ಯಾರ್ಥಿಗಳು ಪ್ರವೇಶ ಪಡೆದ ನಂತರ ಶಾಲಾ ಕಾಲೇಜು ಆಡಳಿತ ಮಂಡಳಿ ಯಾವುದೇ ಕಾರಣಕ್ಕೂ ಪ್ರವೇಶ ಪಡೆಯಲು ಬಂದ ವಿದ್ಯಾರ್ಥಿಗಳನ್ನು ನಿರಾಕರಿಸುವಂತಿಲ್ಲ ಖಡಕ್ಕಾಗಿ ಎಚ್ಚರಿಕೆ ನೀಡಿದ್ದಾರೆ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿದರೆ ಅಂತಹಾ ಕಾಲೇಜು ವಿರುದ್ಧ ಸರ್ಕಾರದ ನಿಯಮ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರವಿ ಎಂ ಹಾಗೂ ಪರಿಶಿಷ್ಟ ಪಂಗಡದ ವರ್ಗದ ಮ್ಯಾನೇಜರ್ ರವಿಕುಮಾರ್ ಹಟ್ಟಿ ಇವರು ಜಂಟಿಯಾಗಿ ಕಾಲೇಜುಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಡಳಿತ ಮಂಡಳಿಯ ವ್ಯವಸ್ಥಾಪಕರಿಗೆ ಸೂಚನೆ ನೀಡಿದ್ದಾರೆ.
ಪ್ರೀಶಿಪ ಯೋಜನೆಯಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಶುಲ್ಕವನ್ನು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡದ ವರ್ಗದ ಇಲಾಖೆಯು ಸಂಪೂರ್ಣವಾಗಿ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ಇಲಾಖೆಯ ಅಧಿಕಾರಿಗಳ ಆಶಯವಾಗಿದೆ ಎಂದು ರವಿ ಎಂ ರವರು ಹೇಳಿದರು.