
ಕೋಲಾರ, ಮಾ,೧೫- ಕೋಲಾರ ಜಿಲ್ಲೆಯ ಫಲಾನುಭವಿಗಳ ಸಮಾವೇಶವನ್ನು ಮಾ ೧೫ ರಂದು ನಾಳೆ ಬುಧವಾರ ಜಿಲ್ಲಾ ಆಡಳಿತ ಕಛೇರಿಯ ಸಮೀಪದ ವಿಶಾಲವಾದ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ಅಂತಿಮ ಹಂತದ ರೂಪುರೇಷಗಳನ್ನು ಸಿದ್ದ ಪಡಿಸಲು ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲಿಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಫಲಾನುಭವಿಗಳ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾವೇಶವನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದು ಜಿಲ್ಲೆಯ ಪ್ರತಿಯೊಬ್ಬ ಅಧಿಕಾರಿ ನೌಕರನ ಕರ್ತವ್ಯ ಎಂದು ಹೇಳಿದರು.
ಜಿಲ್ಲೆಯಲಿ ಒಟು ೧೭ ಲಕ್ಷ ಜನ ಸಂಖ್ಯೆ ಇದೆ. ಫಲಾನುಭವಿಗಳ ಸಂಖ್ಯೆ ೨೫ ಲಕ್ಷ ಇದೆ. ಒಬ್ಬ ಫಲಾನುಭವಿ ಸರ್ಕಾರದ ವಿವಿಧ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆದಿರುವುದರಿಂದ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.
ಫಲಾನುಭವಿಗಳ ಸಮಾವೇಶವನ್ನು ವಿಭಿನ್ನವಾಗಿ ಸಂಘಟಿಸುವುದು ಸರ್ಕಾರ ಆಶಯವಾಗಿದೆ. ಸಮಾವೇಶದಲ್ಲಿ ಪಕ್ಷ ಭೇಧ ಮರೆತು ಎಲ್ಲಾ ಪಕ್ಷದವರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮುಖ್ಯವಾಗಿ ಜಿಲ್ಲೆಯ ೬ ತಾಲ್ಲೂಕುಗಳಿಂದ ಸರಿಸುಮಾರು ೪೦ ಸಾವಿರ ಫಲಾನುಭವಿಗಳು ಆಗಮಿಸಲಿದ್ದಾರೆ. ಇವರೆಲ್ಲಾರಿಗೂ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದರು.
ಫಲಾನುಭವಿಗಳನ್ನು ಅವರವರ ಗ್ರಾಮ ಪಂಚಾಯಿತಿಗಳಿಂದ ಕರೆತರಲು ಹಾಗೂ ಕಾರ್ಯಕ್ರಮ ಮುಗಿದ ನಂತರ ಸುರಕ್ಷಿತವಾಗಿ ಅವರವರ ಮನೆಗಳಿಗೆ ತಲುಪಿಸಲು ಸೂಕ್ತ ಸಾರಿಗೆ ವ್ಯವಸ್ಥೆ ಮಾಡಬೇಕು. ಆದ್ದರಿಂದ ಸಾರಿಗೆ ಇಲಾಖೆ ಸಹಯೋಗದಲಿ ಸುಮಾರು ೮೫ ಸರ್ಕಾರಿ ಬಸ್‌ಗಳನ್ನು ಪ್ರತಿ ಗ್ರಾಮ ಪಂಚಾಯಿತಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ನಾಳೆ ಸಂಜೆ ಆಯಾ ಗ್ರಾಮ ಪಂಚಾಯಿತಿಗಳು ಅಥವಾ ತಾಲ್ಲೂಕು ಪಂಚಾಯಿತಿಗಳ ಕಛೇರಿ ಬಳಿ ವಾಹನಗಳು ಸಿದ್ದವಾಗಿರುತ್ತದೆ ಎಂದು ತಿಳಿಸಿದರು.
ಬಸ್‌ಗಳಿಗೆ ರೂಟ್ ಸಂಖ್ಯೆಯನ್ನು ನೀಡಿ ಗೊಂದಲಕ್ಕೆ ಆಸ್ಪದವಾಗದಂತೆ ನೋಡಿಕೊಳ್ಳುವುದು ತಾಲ್ಲೂಕು ಮಟ್ಟದ ಅಧಿಕಾರಿಗಳ ಜವಬ್ದಾರಿಯಾಗಿರುತ್ತದೆ ಎಂದ ಅವರು ಸಮಾವೇಶಕ ಸೇರುವ ಮೈದಾನದಲ್ಲಿ ಸಾಕಷ್ಟು ತರ್ತು ಚಿಕಿತ್ಸಾ ವಾಹನ ಹಾಗೂ ವೈದ್ಯಕೀಯ ನೆರವು ಲಭ್ಯ ಇರುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕು. ವೇದಿಕೆಯ ಮುಂಭಾಗದಲ್ಲಿ ಗಣ್ಯರಿಂದ ನೇರವಾಗಿ ಸೌಲಭ್ಯಗಳನ್ನು ಪಡೆಯುವ ಫಲಾನುಭವಿಗಳಲ್ಲದೆ ತಾಲ್ಲೂಕುವಾರು ೬ ವಿಭಾಗಗಳಲ್ಲಿ ಫಲಾನುಭವಿಗಳಿಗೆ ಸೂಕ್ತ ಆಸನ ವ್ಯವಸ್ಥೆ ಮಾಡಬೇಕು.ವಿವಿಧ ಹೊಣೆಗಾರಿಕೆಗಳನ್ನು ನಿಭಾಯಿಸಲು ಸಮಿತಿಗಳನ್ನು ರಚಿಸಲಾಗಿದೆ ಎಂದರು
ಉಪ ವಿಭಾಗಾಧಿಕಾರಿಗಳು ಅಧ್ಯಕ್ಷರಾಗಿರುವ ಸಮಿತಿಯು ಒಟ್ಟಾರೆ ಕಾರ್ಯಕ್ರಮದ ಪರ್ಯವೇಕ್ಷಣೆ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರ ಅಧ್ಯಕ್ಷತೆ ಸಮಿತಿಯು ವೇದಿಕೆ ಸಂಪೂರ್ಣ ಜವಾಬ್ದಾರಿ, ಕಾರ್ಯಕ್ರಮದ ಮುಖ್ಯ ಯೋಜನಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಫಲಾನುಭವಿಗಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸುವುದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಅಧ್ಯಕ್ಷತೆಯಲ್ಲಿ ನಿರೂಪಣೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಉಸ್ತುವಾರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಅಧ್ಯಕ್ಷತೆ ಸಮಿತಿಯು ಫಲಾನುಭವಿಗಳಿಗೆ ಹಾಗೂ ಪತ್ರಕರ್ತರಿಗೆ ಊಟೋಪಚಾರದ ವ್ಯವಸ್ಥೆ, ಡಿ.ಸಿ ಕೆ.ಎಸ್.ಆರ್.ಟಿ.ಸಿ ಇವರ ಅಧ್ಯಕ್ಷತೆಯಲ್ಲಿ ಸಾರಿಗೆ ವ್ಯವಸ್ಥೆ ಹೀಗೆ ಹಲವು ಸಮಿತಿಗಳನ್ನು ರಚಿಸಲಾಗಿದೆ ಹಾಗೂ ಅವರುಗಳಿಗೆ ಜವಾಬ್ದಾರಿಗಳನ್ನು ಸಹ ವಹಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅಧಿಕಾರಿ ಸಿಬ್ಬಂದಿ ಸಕ್ರಿಯೆಯಾಗಿ ಪಾಲ್ಗೊಳ್ಳಬೇಕು. ಸಾರಿಗೆ ವ್ಯವಸ್ಥೆಯನ್ನು ಅಚ್ಚುಕಚ್ಚಾಗಿ ನಿರ್ವಹಿಸಬೇಕು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಎಲ್ಲಾ ಹಾಲು ಒಕ್ಕೂಟಗಳ ಸಿಬ್ಬಂದಿ ಹಾಜರಾಗಬೇಕು. ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಮಾಡಬೇಕು. ವಾಹನ ನಿಲುಗಡೆಗೆ ಪ್ರತೇಕವಾದ ವ್ಯವಸ್ಥೆ ಮಾಡಬೇಕು. ಪೋಟೋಕಾಲ್ ಪ್ರಕಾರ ಗಣ್ಯರಿಗೆ ಬೆಂಗಾವಲು ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ವಿನಾಯಕ್, ಡಿವೈಸ್‌ಪಿ ಮುರಳೀಧರ್, ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮೀ, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್, ಪುರಸಭೆಗಳ ಮುಖ್ಯಾಧಿಕಾರಿಗಳು, ತಾಲ್ಲೂಕು ಮಟ್ಟದ ಕಾರ್ಯನಿರ್ವಹಕಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.