ಫಲಿಸಿದ ನಾರಾಯಣಗೌಡರ 4 ವರ್ಷಗಳ ಸತತ ಪ್ರಯತ್ನ

ಕೆ.ಆರ್.ಪೇಟೆ.ಮೇ.28: ಮಂಡ್ಯ ಜಿಲ್ಲೆಯ 791 ಹಳ್ಳಿಗಳಿಗೆ ಶಾಶ್ವತ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಮಹಾತ್ವಾಕಾಂಕ್ಷೆಯ 690 ಕೋಟಿ ಮೊತ್ತದ ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿರುವುದಕ್ಕೆ ಸಚಿವ ಕೆ.ಸಿ.ನಾರಾಯಣಗೌಡರ ಅಭಿಮಾನಿ ಬಳಗ ಹರ್ಷ ವ್ಯಕ್ತಪಡಿಸಿದೆ.
ಈ ಕುರಿತು ಪಟ್ಟಣದ ತಾಲ್ಲೂಕು ಪಂಚಾಯಿತಿಯ ಕಛೇರಿಯಲ್ಲಿ ಮಾತನಾಡಿದ ನಾರಾಯಣಗೌಡರ ಅಭಿಮಾನಿಗಳು ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅಂದು ಕೊಟ್ಟ ಮಾತಿನಂತೆ ಈಗ ಜಿಲ್ಲೆಗೆ 690 ಕೋಟಿ ರೂ. ವೆಚ್ಚದ ಶುದ್ಧ ಕುಡಿಯುವ ನೀರಿನ ಯೋಜನೆಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಶ್ರೀಘ್ರವೇ ಟೆಂಡರ್ ಆಹ್ವಾನಿಸಿ, ಕಾಮಗಾರಿ ಪ್ರಾರಂಭಿಸಲಾಗುವುದು.
ಜಲ ಜೀವನ್ ಮಿಷನ್ ಯೋಜನೆಯಡಿ ಹಾಗೂ ನಬಾರ್ಡ್ ನೆರವಿನಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಈ ಯೋಜನೆ ಅನುμÁ್ಠನಗೊಳ್ಳಲಿದೆ. ಕೆ.ಆರ್.ಪೇಟೆ ಉಪ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರಿಗೆ ನಾರಾಯಣಗೌಡ ಅವರು ಜಲಾಶಯದಿಂದ ಕ್ಷೇತ್ರಕ್ಕೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಯೋಜನೆಗೆ ಮನವಿ ಸಲ್ಲಿಸಿದ್ದರು. ಇದರ ಕ್ರಿಯಾ ಯೋಜನೆ ಸಿದ್ದಪಡಿಸಿ ಸರ್ಕಾಕ್ಕೆ ನೀಡಿದ್ದ ಸಚಿವ ನಾರಾಯಣಗೌಡ ಯೋಜನೆಯ ಅನುಷ್ಠಾನಕ್ಕೆ ಆಗಾಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತಿದ್ದರು.ಇದರ ಫಲವಾಗಿ ಯೋಜನೆಗೆ ಸಚಿವ ಸಂಪುಟದಲ್ಲಿ ಆಡಳಿತಾತ್ಮಕ ಮಂಜೂರಾತಿ ದೊರಕಿದೆ. 2023 ರ ರೊಳಗೆ ಪ್ರತಿ ಮನೆಗೆ ನಲ್ಲಿಗಳ ಮೂಲಕ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಯೋಜನೆ ಸಾಕಾರಗೊಳ್ಳಲಿದೆ. ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶಕ್ಕೆ 55 ಎಲ್‍ಪಿಸಿಡಿ ಹಾಗೂ ಪಟ್ಟಣ ಪ್ರದೇಶಕ್ಕೆ 135 ಎಲ್‍ಪಿಸಿಡಿ ಕುಡಿಯುವ ನೀರನ್ನು ಪೂರೈಸಲಾಗುವುದು.
ಸಂಪುಟದ ಅನುಮೋದನೆ ದೊರಕಿದ್ದು, ಮೂರು ತಿಂಗಳೊಳಗಾಗಿ ಟೆಂಡರ್ ಪ್ರಕ್ರಿಯೆ ಮುಗಿಯಲಿದೆ. 30 ತಿಂಗಳೊಳಗಾಗಿ ಯೋಜನೆಯನ್ನು ಪೂರ್ಣಗೊಳಿಸಿ, ಯೋಜನೆಯ ರೂಪು ರೇμÉಯಂತೆ ಮನೆಮನೆಗೆ ನಲ್ಲಿಯ ಮೂಲಕ ನೀರಿನ ಸಂಪರ್ಕ ಕಲ್ಪಿಸಲಾಗುವುದು. ಮಂಡ್ಯ ಜಿಲ್ಲೆಗೆ ದಶಕಗಳ ನಂತರ ಬೃಹತ್ ಮೊತ್ತದ ಯೋಜನೆಯೊಂದನ್ನು ತರುವಲ್ಲಿ ಸಚಿವ ಡಾ. ನಾರಾಯಣಗೌಡ ಅವರ ಪಾತ್ರ ಮಹತ್ವದ್ದು. ಈ ಯೋಜನೆಗೆ ಮಂಜೂರಾತಿ ದೊರಕಿಸಿಕೊಡಲು ಸಹಕರಿಸಿದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಈ ಸಂದರ್ಭದಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.
ಒಟ್ಟು 791 ಕ್ಕು ಹೆಚ್ಚು ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ
ಈ ಯೋಜನೆಯಿಂದಾಗಿ ಕೆ.ಆರ್.ಪೇಟೆ ತಾಲೂಕಿನ 310 ಕ್ಕು ಹೆಚ್ಚು ಹಳ್ಳಿಗಳು, ನಾಗಮಂಗಲ ತಾಲೂಕಿನ 391 ಹಳ್ಳಿಗಳು, ಬಿ.ಜಿ.ನಗರ ಹಾಗೂ ಬೆಳ್ಳೂರು ಪಟ್ಟಣ ಪಂಚಾಯತಿ ಮತ್ತು ಪಾಂಡವಪುರ ತಾಲೂಕಿನ 96 ಹಳ್ಳಿಗಳು ಸೇರಿದಂತೆ ಒಟ್ಟು 791 ಕ್ಕು ಹೆಚ್ಚು ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ತಲುಪಲಿದೆ. ನಳದ ಮೂಲಕ ಪ್ರತಿ ಮನೆ ಮನೆಗೂ ಕುಡಿಯುವ ನೀರಿನ ಸಂಪರ್ಕ ಆಗಲಿದೆ.
4 ಲಕ್ಷಕ್ಕು ಹೆಚ್ಚು ಜನರಿಗೆ ಯೋಜನೆಯ ಲಾಭ
ಜಿಲ್ಲೆಯ ಮೂರು ತಾಲೂಕಿನ ಪಟ್ಟಣ ಹಾಗೂ ಹಳ್ಳಿ ಸೇರಿದಂತೆ ಒಟ್ಟು 4,16,568 ಜನರಿಗೆ ಯೋಜನೆ ನೇರ ಲಾಭ ಸಿಗಲಿದೆ. ಕೆ.ಆರ್. ಪೇಟೆ ತಾಲ್ಲೂಕಿನ 1,95,112 ಜನರಿಗೆ, ನಾಗಮಂಗಲ ತಾಲ್ಲೂಕಿನ 1,31,221 ಜನರಿಗೆ ಹಾಗೂ ಪಾಂಡವಪುರದ 90,235 ಜನರಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯಿಂದ ಅನುಕೂಲವಾಗಲಿದೆ.