ಫೆಡರಲ್ ಪಬ್ಲಿಕ್ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

ರಾಯಚೂರು,ಸೆ.೧೪-ಇಂದು ನಗರದ ಹೊರಹೊಲಯದಲ್ಲಿ ಬರುವ ಫೆಡರಲ್ ಪಬ್ಲಿಕ್ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳು ಮಾತನಾಡುತ್ತಾ, ಹಿಂದಿ ಭಾಷೆ ರಾಷ್ಟ್ರೀಯ ಭಾಷೆಯಾಗಿ ಪರಿವರ್ತನೆ ಆಗಿರುತ್ತದೆ ಎಂದರು.ಈ ವೇಳೆ ಶಾಲೆ ಶಿಕ್ಷಕಿ ನಿವೇದಿತಾ ಅವರು ಮಾತನಾಡಿ, ಇಡೀ ದೇಶದಲ್ಲಿ ಶೇ. ೮೦ ರಷ್ಟು ಅನೇಕ ರಾಜ್ಯಗಳಲ್ಲಿ ತಮ್ಮ ಮಾತೃ ಭಾಷೆಯಾಗಿ ಹಿಂದಿ ಭಾಷೆ ಮಾತನಾಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಮಧುಮತಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಉಪಸ್ಥಿತರಿದ್ದರು.