ಫೆಬ್ರವರಿ ೨೫ಕ್ಕೆ ರಾಜ್ಯಮಟ್ಟದ ಸಂವಿಧಾನ ಜಾಗೃತಿ ಸಮಾವೇಶ

ಚಿಕ್ಕಬಳ್ಳಾಪುರ, ಫೆ.೨೩: ಇದೇ ತಿಂಗಳ ೨೫ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಸಂವಿಧಾನ ಜಾಗೃತಿ ಜಾಥದ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಭಾಗವಹಿಸುವ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳಿಗೆ ಸಾರಿಗೆ ವ್ಯವಸ್ಥೆ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ “ಸಂವಿಧಾನ ಜಾಗೃತಿ ಜಾಥಾದ ಬೃಹತ್ ಐಕ್ಯತಾ ಸಮಾವೇಶ” ಕಾರ್ಯಕ್ರಮದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ನಮ್ಮ ಜಿಲ್ಲೆಯಲ್ಲಿ ಕಳೆದ ಜನವರಿ ೨೬ ರಿಂದ ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯ ೭ ತಾಲ್ಲೂಕುಗಳ ಗ್ರಾಮಪಂಚಾಯ್ತಿಗಳು ಹಾಗೂ ನಗರ ಸಳ್ಥೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಮುಕ್ತಾಯವಾಗಿರುತ್ತದೆ. ಕೊನೆಯದಾಗಿ ಶಿಡ್ಲಘಟ್ಟ ತಾಲ್ಲೂಕಿನ ವ್ಯಾಪ್ತಿಯಲ್ಲಿ ಕಾರ್ಯಕ್ರಮದ ಸ್ತಭ್ಧ ಚಿತ್ರದ ಜಾಥಾ ಸಂಚರಿಸುತ್ತಿದೆ, ಫೆಬ್ರವರಿ ೨೩ ಕ್ಕೆ ಶಿಡ್ಲಘಟ್ಟ ತಾಲ್ಲೂಕಿನಲ್ಲಿಯೂ ಈ ಕಾರ್ಯಕ್ರಮ ಕೊನೆಗೊಳ್ಳಲಿದೆ ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಐಕ್ಯತಾ ಸಮಾವೇಶ ಮುಂದೂಡಿಕೆ:
ಸಂವಿಧಾನ ಜಾಗೃತಿ ಸಮಾವೇಶದ ಜಿಲ್ಲಾಮಟ್ಟದ ಐಕ್ಯತಾ ಸಮಾವೇಶವನ್ನು ಫೆಬ್ರವರಿ ೨೩ ರಂದು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಹಂಮ್ಮಿಕೊಳ್ಳಲಾಗಿತ್ತು. ಈ ಜಿಲ್ಲಾ ಮಟ್ಟದ ಐಕ್ಯತಾ ಕಾರ್ಯಕ್ರಮವನ್ನು ಸದ್ಯಕ್ಕೆ ಸರ್ಕಾರ ಮೂಂದೂಡಿರುತ್ತದೆ ಮುಂದೆ ಸದರಿ ಕಾರ್ಯ ಕ್ರಮದ ದಿನಾಂಕವನ್ನು ಸರ್ಕಾರ ನಿಗದಿಪಡಿಸಿದಾಗ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು. ಆದರೆ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸಂವಿಧಾನ ಜಾಗೃತಿ ಜಾಥಾದ ಕಾರ್ಯಕ್ರಮಕ್ಕೆ ಜಿಲ್ಲೆಯ ಸಾರ್ವಜನಿಕರು ಮತ್ತು ಜನ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು,ಜನಪ್ರತಿನಿಧಿಗಳನ್ನು ಕರೆದುಕೊಂಡು ಹೊಗಿ ಬರಲು ೭೦ ಕೆ.ಎಸ್.ಆರ್.ಟಿ.ಸಿ ಬಸ್ ಗಳ ವ್ಯವಸ್ಥೆಯನ್ನು ಮಾಡಲಾಗಿದೆ.ಕಾರ್ಯಕ್ರಮದಂದು ಬಸುಗಳು ಸಂಚರಿಸುವ, ನಿಲುಗಡೆ ನೀಡುವ, ಕಾರ್ಯಕ್ರಮಕ್ಕೆ ಹೂಗಿ ಬರಲು ಮಾರ್ಗನಕ್ಷೆಗಳನ್ನು ಯೋಜಿತ ರೀತಿಯಲ್ಲಿ ಮಾಡಿಕೊಂಡು ಸಾರಿಗೆ ವ್ಯವಸ್ಥೆ ಕಲ್ಪಿಸಲು ಸ್ಥಳೀಯಯವಾಗಿ ಮಾಹಿತಿ ನೀಡಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸವವರಿಗೆ ಕುಡಿಯುವ ನೀರಿನ ವ್ಯವಸ್ಥೆ ಊಟ,ತಿಂಡಿ,ಸಾರಿಗೆ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕಲ್ಪಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ ಸರ್ಮಪಕವಾಗಿ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳು ಕಟ್ಟು ನಿಟ್ಟಿನ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ಸಭೆಯಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ|| ಎನ್.ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ತೇಜಾನಂದ ರೆಡ್ಡಿ, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.