ಫೆ.೨೮ ರಂದು ದಾವಣಗೆರೆ ವಿವಿ ಘಟಿಕೋತ್ಸವ

ದಾವಣಗೆರೆ.ಫೆ.26: ತೋಳಹುಣಸೆಯ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ 2021-22ನೇ ಸಾಲಿನ 10ನೇ ವಾರ್ಷಿಕ ಘಟಿಕೋತ್ಸವ ಫೆ. 28ರ ಬೆಳಿಗ್ಗೆ ‌10.15ಕ್ಕೆ ನಡೆಸಲಾಗುವುದು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ್ ತಿಳಿಸಿದರು.ದಾವಣಗೆರೆ ವಿಶ್ವವಿದ್ಯಾಲಯದ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಗಂಗೊಂತ್ರಿಯಲ್ಲಿ ನಡೆಯುವ ಘಟಿಕೋತ್ಸವಕ್ಕೆ ರಾಜ್ಯದ ರಾಜ್ಯಪಾಲರು, ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ‌ ಥಾವರ್ ಚಂದ್ ಗೆಲ್ಲೋಟ್‌ ಅಧ್ಯಕ್ಷತೆ ವಹಿಸುವರು. ಸಮ-ಕುಲಾಧಿಪತಿಗಳು,ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವತ್ಥ ನಾರಾಯಣ ಉಪಸ್ಥಿತರಿರುವರು. ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷ ಪ್ರೊ.ಟಿ.ಜಿ.ಸೀತಾರಾಮ್‌ ಮುಖ್ಯ ಅತಿಥಿಗಳಾಗಿ ಘಟಿಕೋತ್ಸವ ಭಾಷಣ ಮಾಡುವರು,ಘಟಿಕೋತ್ಸವದಲ್ಲಿ 1  ಅಭ್ಯರ್ಥಿ ಮಾಸ್ಟರ್ ಆಫ್ ಫಿಲಾಸಫಿ (ಎಂ.ಫಿಲ್‌) ಮತ್ತು 4 ಮಹಿಳಾ ಹಾಗೂ 10 ಪುರುಷ ಅಭ್ಯರ್ಥಿಗಳು ಸೇರಿ ಒಟ್ಟು 14 ಜನರಿಗೆ ಡಾಕ್ಟರ್ ಆಫ್ ಫಿಲಾಸಫಿ (ಪಿ.ಹೆಚ್‌ಡಿ) ಪದವಿಗೆ ಪ್ರಧಾನ ಮಾಡಲಾಗುವುದು.ಸ್ನಾತಕ ಬಿ.ಎ.,ಬಿ.ಎಸ್.ಡಬ್ಲ್ಯೂ.ಬಿ.ವಿ.ಎ.. ಡಿಪ್ಲೋಮಾ ಅಂಡ್ ಮಲ್ಟಿಮೀಡಿಯಾ ಬಿ.ಎಸ್ಸಿ.ಬಿ.ಸಿ.ಎ.ಬಿ.ಕಾಂ.ಬಿ.ಬಿ.ಎ.ಬಿ.ಇಡಿ., ಹಾಗೂ ಬಿ.ಪಿ.ಇಡಿ., ಪದವಿಗಳಲ್ಲಿ 2021-22ನೇ ಸಾಲಿನಲ್ಲಿ 7,219 ಮಹಿಳಾ ಹಾಗೂ 4,960 ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 12,179 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಸ್ನಾತಕೋತ್ತರ ಪದವಿಗಳಲ್ಲಿ 2021-22ನೇ ಸಾಲಿನಲ್ಲಿ 1,161 ಮಹಿಳಾ ವಿದ್ಯಾರ್ಥಿಗಳು ಹಾಗೂ 638 ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 1,799 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿರುತ್ತಾರೆ. ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳು ಸೇರಿ ಒಟ್ಟು 13,978 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿರುತ್ತಾರೆ.2021-22 ನೇ ಸಾಲಿನಲ್ಲಿ ಒಟ್ಟು 81 ಸ್ವರ್ಣ ಪದಕಗಳು ಇದ್ದು, ಸ್ನಾತಕ ಪದವಿಯಲ್ಲಿ 10 ಮಹಿಳಾ ಹಾಗೂ 04 ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 14 ವಿದ್ಯಾರ್ಥಿಗಳು 22 ಸ್ವರ್ಣ ಪದಕಗಳನ್ನು ಪಡೆಯಲಿದ್ದಾರೆ. ಹಾಗೂ ಸ್ನಾತಕೋತ್ತರ ಪದವಿಯಲ್ಲಿ 22 ಮಹಿಳಾ ಹಾಗೂ 09 ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 31 ವಿದ್ಯಾರ್ಥಿಗಳು 59 ಸ್ವರ್ಣ ಪದಕಗಳನ್ನು ಪಡೆಯಲಿದ್ದಾರೆ.ಒಟ್ಟಾರೆ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಒಟ್ಟು 32 ಮಹಿಳಾ ವಿದ್ಯಾರ್ಥಿನಿಗಳು ಹಾಗೂ 13 ಪುರುಷ ವಿದ್ಯಾರ್ಥಿಗಳು ಸೇರಿ ಒಟ್ಟು 45 ವಿದ್ಯಾರ್ಥಿಗಳು 81 ಚಿನ್ನದ ಪದಕಗಳನ್ನು ಹಂಚಿಕೊಂಡಿರುತ್ತಾರೆಂದರು.ದಾವಣಗೆರೆ ವಿಶ್ವವಿದ್ಯಾನಿಲಯ, ಶಿವಗಂಗೋತ್ರಿ, ದಾವಣಗೆರೆ. 2021-2022ರಲ್ಲಿ ನಡೆದ ಪರೀಕ್ಷೆಗಳಲ್ಲಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ (ಎಂ.ಕಾಂ.,) ವಿಭಾಗದ ಹಾಲಮ್ಮ ಬಿ., ಸ್ನಾತಕೋತ್ತರ ಜೀವರಸಾಯನಶಾಸ್ತ್ರ ವಿಭಾಗದ ಕೆ. ಅರುಣ್ ಶರ್ಮ ವಿದ್ಯಾರ್ಥಿಯು ಪಡೆದು ತಲಾ 5 ಸ್ವರ್ಣ ಪದಕಗಳನ್ನು ಪಡೆದಿರುತ್ತಾರೆ. ವಿದ್ಯಾರ್ಥಿನಿಯು ಮತ್ತು ಅತೀ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ.2021-22ನೇ ಶೈಕ್ಷಣಿಕ ವರ್ಷದಲ್ಲಿ ಸ್ನಾತಕ ಪದವಿಯಲ್ಲಿ ಶೇಕಡ 73.22 ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇಕಡ 96.82ರಷ್ಡು ಫಲಿತಾಂಶ ಬಂದಿದೆ ಎಂದು ಕುಲಸಚಿವರು (ಪರೀಕ್ಷಾಂಗ) ಮಾಹಿತಿ ನೀಡಿದರು.