ಫೆ.1. ರಂದು ಶ್ರೀ ಮಡಿವಾಳ ಮಾಚಿದೇವ ಜಯಂತಿ ಆಚರಣೆ

ಕಲಬುರಗಿ:ಜ.25:ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಇದೇ ಫೆ.1 ರಂದು ಗುರುವಾರ ಮಧ್ಯಾಹ್ನ 12.30 ಗಂಟೆಗೆ ಕಲಬುರಗಿ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಲಬುರಗಿ ಬಿದ್ದಾಪೂರ ಕಾಲೋನಿಯ ಅಕ್ಕಮಹಾದೇವಿ ಆಶ್ರಮದ ಪೂಜ್ಯ ಪ್ರಭುತಾಯಿ ಅವರು ದಿವ್ಯ ಸಾನಿಧ್ಯವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ಹಾಗೂ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಅವರು ಗೌರವ ಉಪಸ್ಥಿತಿ ವಹಿಸುವರು.
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಹಾಗೂ ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಿ. ಜಾಧವ, ಶಾಸಕರುಗಳಾದ ಬಿ.ಆರ್.ಪಾಟೀಲ, ಎಂ.ವೈ. ಪಾಟೀಲ, ಕನೀಜ್ ಫಾತೀಮಾ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ತಿಮ್ಮಣ್ಣಪ್ಪ ಕಮಕನೂರ ಹಾಗೂ ಮಹಾನಗರ ಪಾಲಿಕೆ ಮಹಾಪೌರ ವಿಶಾಲ ಎಸ್. ದರ್ಗಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಅಜಯ ಹಿಲೋರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಂ. ಸುಂದರೇಶ ಬಾಬು, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಎಸ್, ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷರಾದ ವಿಠಲ್ ಎಸ್. ಮಡಿವಾಳ ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿಗಳಾದ ಡಾ ದಯಾನಂದÀ ಅಗಸರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಹಿರಿಯ ಸಾಹಾಯಕ ನಿರ್ದೇಶಕ ಮಲ್ಲಣ್ಣ ಮಡಿವಾಳ ವಿಶೇಷ ಉಪನ್ಯಾಸ ನೀಡುವರು.