ಫೆ.10 ರಂದು ಬೃಹತ್ ರೈತ ಸಮಾವೇಶ

ಕಲಬುರಗಿ,ಜ 30: ಕೇಂದ್ರ ಮತ್ತು ರಾಜ್ಯ ಸರಕಾರ ಈ ಬಾರಿ ರೈತಪರ ಬಜೆಟ್ ರೂಪಿಸುವಂತೆ ಹಕ್ಕೊತ್ತಾಯ ಮಂಡಿಸಲು ಫೆಬ್ರವರಿ 10 ಬೆಳಗ್ಗೆ 11ಕ್ಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ಥಂಬೆ ತಿಳಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಂಘದ ಸಂಸ್ಥಾಪಕ ಅಧ್ಯಕ್ಷ ಪೆÇ್ರ.ಎಂ.ಡಿ.ನಂಜುಂಡಪ್ಪ ಅವರ ಸ್ಮರಣೆಯಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ ಎಂದರು.
ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅಧ್ಯಕ್ಷತೆ ವಹಿಸಿ ಹಕ್ಕೊತ್ತಾಯ ಮಂಡಿಸಲಿದ್ದಾರೆ. ರಾಜ್ಯದ ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಸಿ.ಮಹಾದೇವಪ್ಪ, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್, ಮೇಲುಕೋಟೆ ಶಾಸಕ ದರ್ಶನ ಪುಟ್ಟಣ್ಣಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದು, ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.
ಪ್ರತಾಪ್ ರೆಡ್ಡಿ, ಅಶೋಕಕುಮಾರ್, ರುದ್ರಯ್ಯ ಹಿರೇಮಠ, ನಸೀಮುದ್ದೀನ್ ಪೆ.10ರಂದು ಬೃಹತ್ ರೈತ ಸಮಾವೇಶ
ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರಕಾರ ಈ ಬಾರಿ ರೈತಪರ ಬಜೆಟ್ ರೂಪಿಸುವಂತೆ ಹಕ್ಕೊತ್ತಾಯ ಮಂಡಿಸಲು ಫೆಬ್ರವರಿ 10 ಬೆಳಗ್ಗೆ 11ಕ್ಕೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ಥಂಬೆ ತಿಳಿಸಿದರು.

ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಂಘದ ಸಂಸ್ಥಾಪಕ ಅಧ್ಯಕ್ಷ ಪೆÇ್ರ.ಎಂ.ಡಿ.ನಂಜುಂಡಪ್ಪ ಅವರ ಸ್ಮರಣೆಯಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ ಎಂದರು.
ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅಧ್ಯಕ್ಷತೆ ವಹಿಸಿ ಹಕ್ಕೊತ್ತಾಯ ಮಂಡಿಸಲಿದ್ದಾರೆ. ರಾಜ್ಯದ ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಸಿ.ಮಹಾದೇವಪ್ಪ, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್, ಮೇಲುಕೋಟೆ ಶಾಸಕ ದರ್ಶನ ಪುಟ್ಟಣ್ಣಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದು, ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.
ಪ್ರತಾಪ್ ರೆಡ್ಡಿ, ಅಶೋಕಕುಮಾರ್, ರುದ್ರಯ್ಯ ಹಿರೇಮಠ, ನಸೀಮುದ್ದೀನ್, ರಮೇಶ್ ರಾಗಿ,ಸಿದ್ದು ಅಂಕಲಗಾ, ಕರೆಪ್ಪ, ಮಂಜುಳಾ, ಮಹಾದೇವಿ, ಬಾಬುರಾವ್, ವಿಜಯಕುಮಾರ್, ರಾಜು ಇತರರಿದ್ದರು.