ಫೆ. 3 ರಂದು ಕನ್ನಡ ಭವನ ಉದ್ಘಾಟನೆ

ಬೀದರ:ಫೆ.1 : ಬರುವ ಫೆಬ್ರವರಿ 3ರಂದು ನಗರದ ಚಿಕ್‍ಪೇಟ್ ಹತ್ತಿರದ ಗುರುನಾನಕ-ಚಿಕ್‍ಪೇಟ್ ರಸ್ತೆಯ ಲಾವಣ್ಯ ಫಂಕ್ಷನ್ ಹಾಲ್ ಎದುರು ಭಾಗದಲ್ಲಿ ನಿರ್ಮಿಸಿರುವ ಕನ್ನಡ ಭವನದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಅರಣ್ಯ, ಜೀವಿಶಾಸ್ತ್ರ, ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆಯವರು ಭವನದ ಉದ್ಘಾಟನೆ ನೆರವೇರಿಸಲಿದ್ದಾರೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಮಖಾನ್ ಅವರು ವಹಿಸಲಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಭಗವಂತ ಖೂಬಾ, ಕನ್ನಡ ಮತ್ತು ಸಂಸ್ಕøತಿ ಸಚಿವರಾದ ಶಿವರಾಜ ತಂಗಡಗಿ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಉಪಸ್ಥಿತರಿರಲಿದ್ದು, ಶಾಸಕರುಗಳಾದ ಪ್ರಭು ಚವ್ಹಾಣ, ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ, ರಘುನಾಥರಾವ ಮಲ್ಕಾಪುರೆ, ಅರವಿಂದ ಅರಳಿ, ಡಾ.ಚಂದ್ರಶೇಖರ ಪಾಟೀಲ, ಶಶೀಲ ನಮೋಶಿ, ಭೀಮರಾವ ಪಾಟೀಲ, ನಗರಸಭೆ ಅಧ್ಯಕ್ಷರಾದ ಮೊಹ್ಮದ ಗೌಸ್, ಉಪಾಧ್ಯಕ್ಷರಾದ ಲಕ್ಷ್ಮಿಬಾಯಿ ಹಂಗರಗಿ, ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಗಿರೀಶ್ ಬಾಡೋಳೆ, ಪೊಲೀಸ್ ವರೀಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಭಾಗವಹಿಸಲಿದ್ದು, ಜಲ್ಲೆಯ ಕನ್ನಡಾಭಿಮಾನಿಗಳು, ಸಾಹಿತ್ಯ ಪರಿಷತ್ತಿನ ಸದಸ್ಯರು, ಸಾಹಿತಿಗಳು, ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದ್ದಾರೆ.
21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ಸರ್ವಾಧ್ಯಕ್ಷತೆಯಲ್ಲಿ ಬರುವ ಫೆಬ್ರವರಿ 3 ಮತ್ತು 4 ರಂದು ಬೀದರ ನಗರದ ಗುರುನಾನಕ-ಚಿಕ್ಪೇಟ್ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ಕನ್ನಡ ಭವನ ಆವರಣದಲ್ಲಿ ಹಮ್ಮಿಕೊಳ್ಳಲುದ್ದೇಶಿಸಿರುವ ಬೀದರ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ. ಆದರೆ ನಿಗದಿಯಂತೆ ಕನ್ನಡ ಭವನದ ಉದ್ಘಾಟನೆ ನಡೆಯಲಿದೆ. ಸಮ್ಮೇಳನದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದೆಂದು ಹೇಳಿದ್ದಾರೆ.