ಫೆ. 5 ರಂದು ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜಾಥಾಕ್ಕೆ ಚಾಲನೆ

ಕಲಬುರಗಿ:ಫೆ.03:ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಇದೇ ಫೆಬ್ರವರಿ 5 ರಂದು ಬೆಳಿಗ್ಗೆ 8.30 ಗಂಟೆಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಜಾಥಾಕ್ಕೆ ಚಾಲನೆ ನೀಡುವರು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಕಲಬುರಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಲಬುರಗಿ ವಿಭಾಗೀಯ ಜಂಟಿ ನಿರ್ದೇಶಕ ಡಾ.ಶಂಕ್ರಪ್ಪಾ ಎಸ್. ಮೈಲಾರಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರತಿಕಾಂತ ಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಕಲಬುರಗಿ ಜಿಮ್ಸ್ ನಿರ್ದೇಶಕ ಡಾ. ಉಮೇಶ ಎಸ್.ಆರ್., ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧೀಕ್ಷಕರಾದ ಡಾ. ಎ.ಎಸ್. ರುದ್ರವಾಡಿ ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸ್ಶೆಟಿಯ ಪ್ರಾದೇಶಿಕ ಮುಖ್ಯಸ್ಥರಾದ ಗುರುರಾಜ್ ಕುಲಕರ್ಣಿ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.