ಫೆ.8 ರಂದು ಅಂಬಿಗರ ಚೌಡಯ್ಯ ಮೂರ್ತಿ ಅನಾವರಣ

ಕಲಬುರಗಿ,ಫೆ 6: ಬಸನಾಳ ಗ್ರಾಮದಲ್ಲಿ ಫೆ.8ರಂದು ಬೆಳಗ್ಗೆ 10.30ಕ್ಕೆ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಅನಾವರಣ ಸಮಾರಂಭ ಹಾಗೂ ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಅನಾವರಣ ಸ್ವಾಗತ ಸಮಿತಿ ಗೌರವಾಧ್ಯಕ್ಷ ಚಂದ್ರಕಾಂತ ಶಖಾಪುರ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಅಂದು ಗ್ರಾಮದಲ್ಲಿ ವಾದ್ಯ ಮೇಳದೊಂದಿಗೆ ಅಂಬಿಗರ ಚೌಡಯ್ಯನವರ ಮೂರ್ತಿಯ ಮೆರವಣಿಗೆ ನಡೆಯಲಿದೆ ಎಂದರು.
ಮೂರ್ತಿ ಅನಾವರಣ ಕಾರ್ಯಕ್ರಮಕ್ಕೆ ನರಸೀಪುರದ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ತೊನಸನಳ್ಳಿ(ಎಸ್) ಗ್ರಾಮದ ಅಲ್ಲಮಪ್ರಭು ಸಂಸ್ಥಾನ ಪೀಠದ ಡಾ.ಮಲ್ಲಣ್ಣಪ್ಪ ಮಹಾಸ್ವಾಮೀಜಿ, ಮಲ್ಲಿಕಾರ್ಜುನ ಮುತ್ತ್ಯಾ, ವರಲಿಂಗೇಶ್ವರ ಮಹಾಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.ಶಾಸಕ ಎಂ.ವೈ.ಪಾಟೀಲ್ ಅವರು ಅಂಬಿಗರ ಚೌಡಯ್ಯ ನವರ ಮೂರ್ತಿ ಅನಾವರಣ ಮಾಡಿದ್ದು, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್, ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ಜಿಪಂ. ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್, ಮಹಾಂತೇಶ್ ಪಾಟೀಲ್, ಲಚ್ಚಪ್ಪ ಜಮಾದಾರ್, ಶಿವಕುಮಾರ ನಾಟೀಕಾರ್, ಕೇಶವ್ ಮೋಟಗಿ, ಲಕ್ಷ್ಮಿಬಾಯಿ ಹುಣಚಿಕೇರಿ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ಗ್ರಾಮದ ಎಲ್ಲ ನೆರೆಹೊರೆಯ ಗ್ರಾಮಸ್ಥರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.ಜೆಟ್ಟೆಪ್ಪ ಪೂಜಾರಿ, ಭೀಮಣ್ಣ ಅಂಕಲಗಿ, ಮಲ್ಲು ಹಾಗೂ ಇತರರಿದ್ದರು.