ಫೆ. 8 ರಂದು ಗುಲಬರ್ಗಾ ವಿಶ್ವವಿದ್ಯಾಲಯದ 44ನೇ ಸಂಸ್ಥಾಪನಾ ದಿನಾಚರಣೆ

ಕಲಬುರಗಿ:ಫೆ.06:ಗುಲಬರ್ಗಾ ವಿಶ್ವವಿದ್ಯಾಲಯದ 44ನೇ ಸಂಸ್ಥಾಪನಾ ದಿನಾಚರಣೆಯು ಇದೇ ಫೆಬ್ರವರಿ 8 ರಂದು ಬೆಳಿಗ್ಗೆ 11.30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ ಭವನದಲ್ಲಿ ಜರುಗಲಿದೆ.
ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಎಂ. ಮುನಿಯಮ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಅಧ್ಯಕ್ಷತೆ ವಹಿಸುವರು. ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ರೇಷ್ಮಾ ಕೌರ್ ಹಾಗೂ ವಿದ್ಯಾ ವಿಷಯಕ ಸದಸ್ಯ ಪ್ರೊ. ಕೆ. ಲಿಂಗಪ್ಪ ಗೌರವ ಉಪಸ್ಥಿತಿವಹಿಸುವರು.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಡಾ. ಬಿ. ಶರಣಪ್ಪ, ಕುಲಸಚಿವ (ಮೌಲ್ಯಮಾಪನ) ಪ್ರೊ. ಜ್ಯೋತಿ ಧಮ್ಮಪ್ರಕಾಶ್ ಹಾಗೂ ವಿತ್ತಾಧಿಕಾರಿ ಪ್ರೊ. ರಾಜನಾಳ್ಕರ್ ಲಕ್ಷ್ಮಣ್ ಅವರು ಉಪಸ್ಥಿತರಿರುವರು.