ಫೋನ್ ಟ್ಯಾಪಿಂಗ್ ಸಿಬಿಐ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು,ನ.2-ಕರ್ನಾಟಕ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ(ಸಿಬಿಐ) ಆರೋಪ ಪಟ್ಟಿ ಸಲ್ಲಿಸಿದ್ದು ಕೆಲ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳಿಗೆ ನಡುಕ ಉಂಟಾಗಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಿದ ಕೂಡಲೇ ಫೋನ್ ಟ್ಯಾಪಿಂಗ್ ಪ್ರಕರಣವನ್ನು
ಸಿಬಿಐ ತನಿಖೆಗೆ ಆದೇಶಿಸಿತ. ಪ್ರಕರಣದ ಸಂಬಂಧ ಎಫ್ ಐಆರ್ ದಾಖಲಿಸಿದ ಸಿಬಿಐ
ಪಕಳೆದ ಸೆಪ್ಟೆಂಬರ್ ನಲ್ಲಿ ಸಿಬಿಐ ಅಂದಿನ ಬೆಂಗಳೂರು ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಶೋಧ ನಡೆಸಿ ಕಳೆದ ಒಂದು ವರ್ಷದಿಂದ ಪ್ರಕರಣದ ತನಿಖೆ ನಡೆಸುತ್ತಿದೆ.
ಫೋನ್ ಟ್ಯಾಪಿಂಗ್ ನಲ್ಲಿ ಭಾಗಿಯಾಗಿಲ್ಲ ಎಂದಿದ್ದ ಕುಮಾರ್ ಅವರನ್ನು ಪ್ರಶ್ನೆ ಮಾಡಿದ್ದು, ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಮಾಹಿತಿ ಸೋರಿಕೆಯಾಗಿದೆ ಎಂದು ಆರೋಪಿಸಿದ್ದಾರೆ.
ಆದರೆ, ಈ ಹಿಂದೆ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದ್ದ ಕರ್ನಾಟಕ ಪೊಲೀಸ್ ಅಧಿಕಾರಿಗಳು, ಕುಮಾರ್ ಅವರಿಗೆ ಪೆನ್ ಡ್ರೈವ್ ನಲ್ಲಿ ತಡೆ ಕರೆಗಳ ವಿವರ ನೀಡಲಾಗಿತ್ತು ಎಂದು ಹೇಳಿದ್ದಾರೆ. ಹಲವು ರಾಜಕಾರಣಿಗಳು, ಅಧಿಕಾರಿಗಳ ಫೋನ್ ಗಳನ್ನು ಅಕ್ರಮವಾಗಿ ಟ್ಯಾಪ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಕುಮಾರ ಸ್ವಾಮಿ ಸರ್ಕಾರದ ಸೂಚನೆ ಮೇರೆಗೆ ಅಕ್ರಮವಾಗಿ ಫೋನ್ ಗಳನ್ನು ಟ್ಯಾಪಿಂಗ್ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದ್ದು, ಕುಮಾರ ಸ್ವಾಮಿ ಮತ್ತು ಮೈತ್ರಿ ಪಕ್ಷ ಕಾಂಗ್ರೆಸ್ ನಿಂದ ಈ ಆರೋಪವನ್ನು ತಳ್ಳಿಹಾಕಲಾಗಿದೆ.
ರಾಜ್ಯ ಅಪರಾಧ ವಿಭಾಗದಲ್ಲಿ ನಿಯೋಜಿಸಲ್ಪಟ್ಟ ಪೊಲೀಸರು ಸೇರಿದಂತೆ ಹಲವು ಪೊಲೀಸರನ್ನು ವಿಚಾರಣೆಗೊಳಪಡಿಸಿ, ಅನಧಿಕೃತ ಟ್ಯಾಪಿಂಗ್ ನಡೆಸಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಫೋನ್ ಟ್ಯಾಪಿಂಗ್ ನಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ನೀಡಿದ ಹೇಳಿಕೆಗಳಲ್ಲಿ ಹಲವು ರೀತಿಯ ಅವ್ಯವಹಾರಗಳು ಸಿಬಿಐ ನಲ್ಲಿ ಕಂಡು ಬಂದಿವೆ ಎಂದು ಮೂಲಗಳು ತಿಳಿಸಿವೆ.
9880* ಎಂಬ ದೂರವಾಣಿ ಸಂಖ್ಯೆಯನ್ನು ರಾಜ್ಯ ಪೊಲೀಸ್ ತಾಂತ್ರಿಕ ಬೆಂಬಲ ಕೇಂದ್ರದ ಕಣ್ಗಾವಲಿನಲ್ಲಿ ಇಡಲಾಗಿತ್ತು. 2018ರಲ್ಲಿ ದಾಖಲಾದ ಕ್ರಿಮಿನಲ್ ಕೇಸ್ ನಲ್ಲಿ ಈ ಫೋನ್ ಅನ್ನು ತಡೆಗಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಕ್ರೈಂ -1 ಅವರು ತಮ್ಮ ಹಿರಿಯ ಪೊಲೀಸ್ ಅಧಿಕಾರಿ ನೀಡಿದ ಹೇಳಿಕೆ ದಾಖಲಿಸಿ, ಸರ್ವರ್ ನಿಂದ ಕರೆಗಳನ್ನು ಡೌನ್ ಲೋಡ್ ಮಾಡಿಕೊಂಡು, ಪೆನ್ ಡ್ರೈವ್ ನಲ್ಲಿ ಅಂದಿನ ಬೆಂಗಳೂರು ಪೊಲೀಸ್ ಆಯುಕ್ತರಿಗೆ ನೀಡಿದ್ದರು.
ಈ ಆಡಿಯೋ ಫೈಲ್ ಗಳ ಒಂದು ಭಾಗ ಮೊದಲು ಸ್ಥಳೀಯ ಸುದ್ದಿ ವಾಹಿನಿಗಳಿಗೆ ಸೋರಿಕೆಯಾಗಿ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿಟ್ಟು. ಆಡಳಿತ ಮತ್ತು ವಿರೋಧ ಪಕ್ಷಗಳ ರಾಜಕಾರಣಿಗಳು ಮತ್ತು ಅವರ ಸಂಬಂಧಿಕರನ್ನು ಒಂದು ವರ್ಷದ ಅವಧಿಯಲ್ಲಿ ಪೋನ್ ಟ್ಯಾಪ್ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ಸರ್ಕಾರ ಸಿಬಿಐ ತನಿಖೆಗೆ ಆದೇಶನೀಡಿತ್ತು.
ಐಟಿ ಕಾಯ್ದೆ ಮತ್ತು ಟೆಲಿಗ್ರಾಫ್ ಕಾಯ್ದೆಯ ಸೆಕ್ಷನ್ ಗಳ ಅಡಿಯಲ್ಲಿ ಅಪರಿಚಿತ ಸಾರ್ವಜನಿಕ ಮತ್ತು ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿತ್ತು. ಇಂತಹ ತನಿಖೆ, ಕೊನೆಯ ಹಂತಕ್ಕೆ ಬಂದಿದ್ದು, ಸದ್ಯದಲ್ಲಿಯೇ ನ್ಯಾಯಾಲಯಕ್ಕೆ ಸಿಬಿಐ ಪೋನ್ ಟ್ಯಾಪಿಂಗ್ ಪ್ರಕರಣದ ವರದಿಯನ್ನು ಸಲ್ಲಿಸಿದೆ.