ಫ್ಯಾಮಿಲಿ ಪ್ಯಾಕ್ ಮನರಂಜನೆಯ ಹೂರಣ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿವಿಧ ನಿರ್ಮಾಣ ಸಂಸ್ಥೆಯಲ್ಲಿ ನಟಿಸುತ್ತಲೇ ತಮ್ಮದೇ ಹೋಂ ಪ್ರೊಡಕ್ಷನ್ ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅದರ ಸಾಲಿಗೆ ಮತ್ತೊಂದು ಸೇರ್ಪಡೆ ” ಪ್ಯಾಮಿಲಿ ಫ್ಯಾಕ್”. ಮನರಂಜನೆಯ ಹೂರಣ ಹೊಂದಿರುವ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಪೂರ್ಣಗೊಂಡಿದೆ.

ಹಿರಿ ಕಿರಿಯ ಕಲಾವಿದರ ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಲಾಕ್ ಡೌನ್ ಗೆ ಮುನ್ನವೇ ಚಿತ್ರದ ಬಹುಪಾಲು ಚಿತ್ರೀಕರಣ ಮಾಡಿದ್ದ ಚಿತ್ರತಂಡ ಉಳಿದ ಚಿತ್ರೀಯವನ್ನು ಇದೀಗ ಪೂರ್ಣಗೊಳಿಸಿದೆ.

ಬೆಂಗಳೂರಿನ ಸುತ್ತ ಮುತ್ತ ಮೂವತ್ತಕ್ಕೂ ಅಧಿಕ ದಿನಗಳ ಚಿತ್ರೀಕರಣ ನಡೆದಿದೆ. ಸದ್ಯ ಚಿತ್ರೀಕರಣ ನಂತರ ಚಟುವಟಿಕೆಗಳು ಭರದಿಂದ ಸಾಗಿದೆ. ಈ ಹಿಂದೆ ಸಂಕಷ್ಟ ಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ‌ ಅರ್ಜುನ್ ಕುಮಾರ್ “ಫ್ಯಾಮಿಲಿ ಪ್ಯಾಕ್” ಚಿತ್ರವನ್ನು ನಿರ್ದೇಶನ ಮಾಡಿದ್ದು ಹಾಸ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ನಾಯಕ ಲಿಖಿತ್ ಶೆಟ್ಟಿ, ಅಮೃತ ಅಯ್ಯಂಗಾರ್, ರಂಗಾಯಣ ರಘು, ಅಚ್ಯುತಕುಮಾರ್, ಪದ್ಮಜಾರಾವ್, ಶರ್ಮಿತಾ ಗೌಡ, ಸಿಹಿಕಹಿ ಚಂದ್ರು ಮತ್ತಿತರ ಕಲಾವಿದರು ಕೊನೆಯ ದಿನದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಮನೋರಂಜನೆ ಪ್ರಧಾನವಾಗಿರುವ ಈ ಚಿತ್ರದ ನಿರ್ಮಾಪಕರು ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಲಿಖಿತ್ ಶೆಟ್ಟಿ ಜಂಟಿಯಾಗಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

ನಿರ್ಮಾಪಕರಲ್ಲಿ ಒಬ್ಬರಾಗಿರುವ ಲಿಖಿತ್ ಶೆಟ್ಟಿ ಈ ಚಿತ್ರದ ನಾಯಕ ಕೂಡ. ಅಮೃತ ಅಯ್ಯಂಗಾರ್ ನಾಯಕಿ. ರಂಗಾಯಣ ರಘು, ಅಚ್ಯುತಕುಮಾರ್, ಸಿಹಿಕಹಿ ಚಂದ್ರು, ಪದ್ಮಜಾರಾವ್, ಶರ್ಮಿತಾಗೌಡ, ನಾಗಭೂಷಣ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನವಿರುವ ಚಿತ್ರಕ್ಕೆ ಉದಯಲೀಲ ಹಾಗೂ ಶ್ರೀಶ ಕುದುವಳ್ಳಿ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನವಿದೆ. ಮಾಸ್ತಿ ಫ್ಯಾಮಿಲಿ ಪ್ಯಾಕ್ ಗೆ ಸಂಭಾಷಣೆ ಬರೆದಿದ್ದಾರೆ.

ಪುನೀತ್ ದಂಪತಿ ಹಾರೈಕೆ

ಪಿ ಆರ್ ಕೆ ಪ್ರೊಡಕ್ಷನ್ಸ್‌ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ ಫ್ಯಾಮಿಲಿ ಪ್ಯಾಕ್. ಈ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ.

ಚಿತ್ರೀಕರಣದ ಕೊನೆಯ ದಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿ, ಚಿತ್ರೀಕರಣ ವೀಕ್ಷಿಸಿದಲ್ಲದೇ, ಚಿತ್ರತಂಡದ ಪ್ರತಿಯೊಬ್ಬ ಸದಸ್ಯರ ಕಾರ್ಯವನ್ನು ಶ್ಲಾಘಿಸಿ, ಶುಭ ಕೋರಿದ್ದಾರೆ.