ಫ್ರಾನ್ಸ್ ಅಧ್ಯಕ್ಷರ ಜೊತೆ ಮೋದಿ ಚರ್ಚೆ


ಬಾಲಿ ನ.೧೬- ಇಂಡೋನೇಷ್ಯಾದ ಬಾಲಿಯಲ್ಲಿ ಜಿ-೨೦ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹಲವು ಜಾಗತಿಕ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಜಿ-೨೦ ಒಕ್ಕೂಟದ ಏಳು ವಿಶ್ವ ನಾಯಕರನ್ನು ಭೇಟಿಯಾಗಲಿದ್ದಾರೆ.ಇಂಡೋನೇಷ್ಯಾ, ಸ್ಪೇನ್,ಸಿಂಗಾಪುರ್, ಜರ್ಮನಿ, ಇಟಲಿ, ಆಸ್ಟ್ರೇಲಿಯಾ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದ್ದಾರೆ.
ಜಿ-೨೦ ಶೃಂಗಸಭೆಯ ಎರಡನೇ ದಿನವಾದ ಇಂದು ೧೭ನೇ ಆವೃತ್ತಿಯಲ್ಲಿ ಡಿಜಿಟಲ್ ಟ್ರಾನ್ಸ್‌ಫರ್ಮೇಷನ್ ಸೆಷನ್‌ನಲ್ಲಿ ಭಾಗವಹಿಸಲಿದ್ದಾರೆ. ಜಾಗತಿಕ ಸಂರಕ್ಷಣೆಯ ಪ್ರಯತ್ನಗಳಲ್ಲಿ ಮ್ಯಾಂಗ್ರೋವ್‌ಗಳು ಪ್ರಮುಖ ಪಾತ್ರವಹಿಸುತ್ತವೆ. ಇಂಡೋನೇಷ್ಯಾ ಉ-೨೦ ಅಧ್ಯಕ್ಷತೆಯನ್ನು ಇಂದು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರ ಮಾಡಲಿದ್ದಾರೆ.
ಭಾರತ ಮ್ಯಾಂಗ್ರೋವ್‌ಗಳ ರಕ್ಷಣೆ ಮತ್ತು ಪುನಃಸ್ಥಾಪನೆಗೆ ಒತ್ತು ನೀಡುತ್ತಿದೆ, ಜೀವವೈವಿಧ್ಯತೆಯ ಶ್ರೀಮಂತ ತಾಣಗಳಾಗಿವೆ ಎಂದು ಅವರು ತಿಳಿಸಿದ್ದಾರೆ.ನ
ಈ ಕುರಿತು ಟ್ವೀಟ್ ಮಾಡಿರುವ “ಪ್ರಧಾನಿ ನರೇಂದ್ರ ಮೋದಿ ಹವಾಮಾನ ಬದಲಾವಣೆ ಎದುರಿಸಲು ಮತ್ತು ಸುಸ್ಥಿರ ಅಭಿವೃದ್ಧಿ ಹೆಚ್ಚಿಸಲು ಒಗ್ಗೂಡುವ ಬಲವಾದ ಸಂದೇಶ ನೀಡಿದ್ದಾರೆ.
ಮ್ಯಾಂಗ್ರೋವ್ ಅರಣ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬಿಡನ್ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಆಹಾರ ಮತ್ತು ಇಂಧನ ಭದ್ರತೆ ಕುರಿತು ಜಿ-೨೦ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಉಕ್ರೇನ್‌ನಲ್ಲಿ ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ದೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದರು “ನಾವು ಕದನ ವಿರಾಮದ ಹಾದಿಗೆ ಮರಳಲು ಒಂದು ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.
ಕಳೆದ ಶತಮಾನದಲ್ಲಿ, ಎರಡನೆಯ ಮಹಾಯುದ್ಧ ಜಗತ್ತಿನಲ್ಲಿ ವಿನಾಶ ಉಂಟುಮಾಡಿತು. ಆ ಬಳಿಕ ಶಾಂತಿ ಮಾರ್ಗ ಹಿಡಿಯಲು ಅಂದಿನ ಮುಖಂಡರು ತೀವ್ರ ಪ್ರಯತ್ನ ನಡೆಸಿದರು. ಈಗ ನಮ್ಮ ಸರದಿ. ಕೋವಿಡ್ ನಂತರದ ಅವಧಿಗೆ ಹೊಸ ವಿಶ್ವ ಕ್ರಮವನ್ನು ರಚಿಸುವ ಜವಾಬ್ದಾರಿ ನಮ್ಮ ಹೆಗಲ ಮೇಲಿದೆ ಎಂದು ಹೇಳಿದ್ದಾರೆ.