ಫ್ಲೆಕ್ಸ್ ಹರಿದ ಕಿಡಿಗೇಡಿಗಳನ್ನು ಬಂಧಿಸಿ

ತಿ.ನರಸೀಪುರ. ನ.2- ಖಾಸಗೀ ವಾಹಿನಿಯಲ್ಲಿ ಮೂಡಿಬರುತ್ತಿರುವ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ಮಹಾನಾಯಕ ಧಾರವಾಹಿ ಫ್ಲೆಕ್ಸ್ ಹರಿದು ಕಿಡಿಗೇಡಿಗಳು ಅವಮಾನ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ತಿ.ನರಸೀಪುರ ತಾಲ್ಲೂಕಿನ ನಾಗಲಗೆರೆ ಗ್ರಾಮದ ಮುಂಭಾಗ ಹಾಕಿದ್ದ ಮಹಾನಾಯಕ ಧಾರವಾಹಿ ಫ್ಲೆಕ್ಸ್ ಯಾರೋ ಹರಿದು ಹಾಕಿದ್ದು,ಘಟನೆ ಖಂಡಿಸಿ ಇಂದು ಸ್ಥಳದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಉಪನಿರೀಕ್ಷಕ ಮಂಜುನಾಥ್, ತಿ.ನರಸೀಪುರ ತಾಲ್ಲೂಕು ಪೆÇಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಾ.ಬಿ ಆರ್ ಅಂಭೇಡ್ಕರ್ ಜೀವನಾಧಾರಿತ ಧಾರವಾಹಿ ಯಶಸ್ವಿಯಾಗಿ ನಡೆಯುತ್ತಿದೆ. ಗ್ರಾಮದ ಪ್ರಮುಖ ವೃತ್ತಗಳಲ್ಲಿ ಅಂಬೇಡ್ಕರ್ ಫ್ಲೆಕ್ಸ್ ಹಾಕಿ ಸಂಭ್ರಮಿಸುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಕಿಡಿಗೇಡಿಗಳು ಡಾ.ಬಿ ಆರ್ ಭಾವಚಿತ್ರವಿರುವ ಫ್ಲೆಕ್ಸ್ ಹರಿದು ಹಾಕಿರುವುದು ಖಂಡನೀಯ. ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಅಸ್ಪೃಶ್ಯ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ ಆರೋಪಿಗಳಿಗೆ ಉಗ್ರವಾದ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ ದಲಿತ ಸಂಘರ್ಷ ಸಮಿತಿ ಮುಖಂಡರು ಆಗ್ರಹಿಸಿದರು.