ಬಂಕಾಪುರ: ಹೆಚ್ಚಿದ ಬೀದಿ ನಾಯಿಗಳ ಹಾವಳಿ


ಬಂಕಾಪುರ,ಆ.10: ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ.
ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ.
ಅಸಾರ್ ಗಲ್ಲಿಗಳಲ್ಲಿ ಮಾಂಸದಂಗಡಿಗಳು ಇವೆ. ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳು ಕಾಣಿಸುತ್ತವೆ. ಅಂಗಡಿದಾರರು ಸಾರ್ವಜನಿಕ ಸ್ಥಳ, ಕಸದ ತೊಟ್ಟಿಯಲ್ಲಿ ಮಾಂಸದ ತ್ಯಾಜ್ಯ ಹಾಕುವುದರಿಂದ ನಾಯಿಗಳು ಚೆಲ್ಲಾಟ ಹೆಚ್ಚಾಗಿದೆ. ನಾಯಿಗಳ ಹಾವಳಿ ತಡೆಯಲು ಕೆಲ ವರ್ಷಗಳ ಹಿಂದೆ ಪುರಸಭೆ ವಿಷ ಹಾಕಿ ನಾಯಿಗಳನ್ನು ಕೊಂದಿತ್ತು. ಇದರಿಂದ ಕೆಲ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಆದ್ದರಿಂದ ಪುರಸಭೆ ಅಧಿಕಾರಿಗಳ ಬೀದಿ ನಾಯಿಗಳ ನಿಯಂತ್ರಣಕ್ಕೆ ಹೋಗುವುದನ್ನು ಬಿಟ್ಟಿತ್ತು. ಅಲ್ಲಿಂದ ಇಲ್ಲಿಯವರೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.
ಸಂತಾನ ತಡೆ ಚಿಕಿತ್ಸೆ ಮಾಡುವುದರಿಂದ ಬೀದಿ ನಾಯಿಗಳ ಹಾವಳಿ ನಿಯಂತ್ರಣ ಮಾಡಬಹುದು. ಆದರೆ, ಈ ಕಾರ್ಯಕ್ಕೆ ಪುರಸಭೆ ಮುಂದಾಗುತ್ತಿಲ್ಲ. ಆದ್ದರಿಂದ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.
ಬೀದಿ ನಾಯಿಗಳ ಉಪಟಳಕ್ಕೆ ಜನ ಕಂಗಾಲಾಗಿದ್ದಾರೆ. ಪುರಸಭೆ ಇವುಗಳ ನಿಯಂತ್ರಣ ಮಾಡುವುದಕ್ಕೆ ನಿರ್ಲಕ್ಷ್ಯ ವಹಿಸಿದೆ.
ಕೆಲ ವರ್ಷಗಳ ಹಿಂದೆ ಬೀದಿ ನಾಯಿಗಳ ಸ್ಥಳಾಂತರ ಮಾಡಲಾಗಿತ್ತು. ಮತ್ತೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಇದರ ಬಗ್ಗೆ ಮೇಲಧಿಕಾರಿಗಳು ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಯುವರು ಪುರಸಭೆ ಗೇ ಮನವಿ ಸಲ್ಲಿಸಿದರು ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಶಿಗ್ಗಾವಿ ತಾಲೂಕು ಅಧ್ಯಕ್ಷರಾದ ಬಸವರಾಜ್ ಹುರಳಿ, ಹೋಬಳಿ ಶಹರ ಘಟಕ ಅಧ್ಯಕ್ಷರು ಮಂಜುನಾಥ್ ಕತ್ತಿ,ಶಿವು ನಾಗನೂರು, ಗುರುನಾಥ ಕಳ್ಳಿಮನಿ,ಪ್ರದೀಪ್ ಪುಕಾಳೆ, ಓಂ ಪ್ರಕಾಶ ಅಂಗಡಿ, ಮುಂತಾದ ಉಪಸ್ಥಿತರಿದ್ದರು.