ಬಂಗಾಳ‌ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಭೀತಿ:5 ದಿನ ಮಳೆ

ಚೆನ್ನೈ, ನ.24-ಬಂಗಾಳ ಕೊಲ್ಲಿಯಲ್ಲಿ ಮತ್ತೊಮ್ಮೆ ಚಂಡಮಾರುತ ಎದುರಾಗುವ ಭೀತಿ ಎದುರಾಗಿದ್ದು,
ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಮುಂದಿನ ಐದು ದಿನಗಳ ಕಾಲ ದಕ್ಷಿಣ ಭಾರತದ ರಾಜ್ಯಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಸುಳಿವು ನೀಡಿದೆ.
ಚಂಡಮಾರುತದ ಕೇಂದ್ರ ಬಿಂದು ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ. ಇದು ಶ್ರೀಲಂಕಾ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಹೇಳಿದೆ.
ಮುಂದಿನ ಐದು ದಿನಗಳಲ್ಲಿ ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಹೀಗಾಗಿ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇನ್ನೂ ಐದು ದಿನ ಕೆಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾ
ಗಲಿದೆ.