ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಸ್ವೀಕಾರ

ಬಂಟ್ವಾಳ, ಮೇ ೨೨-ಮೇ ೨೧ ರಂದು ರಾಷ್ಟ್ರ ವ್ಯಾಪ್ತಿ ಯೋತ್ಪಾದನೆ ವಿರೋಧಿ ದಿನಾಚರಣೆ ಅಂಗವಾಗಿ ಇಂದು ಶುಕ್ರವಾರ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಅಣ್ಣು ನಾಯ್ಕ್ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿಗಳಿಂದ ಮಿನಿ ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಇದೇ ಸಂದರ್ಭದಲ್ಲಿ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಮಾತನಾಡಿ ನಮ್ಮ ದೇಶ ಶಾಂತಿ ಸೌಹಾರ್ದತೆಗೆ ಹೆಸರಾಗಿದೆ ಭಯೋತ್ಪಾದಕ ಶಕ್ತಿಗಳನ್ನು ನಾವೆಲ್ಲರೂ ಒಗ್ಗಟ್ಟಿನಿಂದ ಎದುರಿಸಬೇಕು ಪರಸ್ಪರ ಸಹಕಾರದಿಂದ ಬದುಕಬೇಕು ಎಂದು ನುಡಿದರು.
ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಸಹಾಯಕರು ಉಪಸ್ಥಿತರಿದ್ದರು.