
ಚಾಮರಾಜನಗರ, ಏ.05- ಪ್ರಧಾನಿ ನರೇಂದ್ರ ಮೋದಿ ಅವರ ಬಂಡೀಪುರ ಭೇಟಿಗೆ ದಿನಗಣನೆಆರಂಭವಾಗಿದ್ದು ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಸಕಲ ತಯಾರಿ ನಡೆಸುತ್ತಿದೆ. ಯಾವುದೇ ಅಹಿತಕರ ಹಾಗೂ ಭದ್ರತಾ ಲೋಪ ಉಂಟಾಗದರೀತಿ ಬಿಗಿ ಭದ್ರತೆ ಕೈಗೊಳ್ಳುವ ಉದ್ದೇಶದಿಂದ ಎಡಿಜಿಪಿ ಅಲೋಕ್‍ಕುಮಾರ್ ಅವರಿಂದು ಬಂಡೀಪುರಕ್ಕೆ ಭೇಟಿಕೊಟ್ಟು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಬಂಡೀಪುರ ಸಫಾರಿಕೇಂದ್ರದ ಸಮೀಪವೇ 3 ಹೆಲಿಪ್ಯಾಡ್ ನಿರ್ಮಾಣಗೊಳ್ಳುತ್ತಿದ್ದು ಸಾರ್ವಜನಿಕರು, ಅಭಿಮಾನಿಗಳನ್ನು ನಿಯಂತ್ರಿಸಲು ಸೂಕ್ತ ಬ್ಯಾರಿಕೇಡ್, ಕಾಂಪೌಂಡ್ ವ್ಯವಸ್ಥೆಇರಬೇಕು, ವನ್ಯಜೀವಿಗಳು ರಸ್ತೆದಾಟುವುದನ್ನು ನಿಗಾ ಇಡಬೇಕು ಸೇರಿದಂತೆ ಇತರೆ ಸೂಚನೆಗಳನ್ನು ಐಜಿಪಿ ಮಧುಕರ್‍ಪವಾರ್ ಹಾಗೂ ಚಾಮರಾಜನಗರಎಸ್‍ಪಿ ಪದ್ಮಿನಿ ಸಾಹೋ ಅವರಿಗೆ ಕೊಟ್ಟಿದ್ದಾರೆ.
ಏಪ್ರಿಲ್ 9 ರಂದು ಬಂಡೀಪುರಕ್ಕೆ ವಿಶೇಷ ಹೆಲಿಕಾಪ್ಟರ್ ಮೂಲಕ ನರೇಂದ್ರ ಮೋದಿ ಬರಲಿದ್ದು ಸಫಾರಿ, ರಾಂಪುರ ಆನೆ ಶಿಬಿರಕ್ಕೆ ಭೇಟಿಕೊಡಲಿದ್ದಾರೆ. ಜೊತೆಗೆ, ಮಾವುತರ ಜೊತೆ ಸಂವಾದ ನಡೆಸಲಿದ್ದುಅದಾದ ಬಳಿಕ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ತೆರಳುವರು ಎಂದು ತಿಳಿದುಬಂದಿದೆ. ಮೋದಿ ಅವರ ಅಧಿಕೃತ ಪ್ರವಾಸ ಪಟ್ಟಿ ಇನ್ನೂ ಕೂಡ ಬಿಡುಗಡೆಯಾಗಿಲ್ಲ. ಆದರೆ, ಪ್ರಧಾನಿ ಬಂಡೀಪುರಕ್ಕೆ ಭೇಟಿಕೊಡುವ ಸಾಧ್ಯತೆ ತೀರಾ ಹೆಚ್ಚಿದೆ.
ಮೋದಿಯವರ ಆಗಮನದ ಕುರಿತು ಮೊನ್ನೆತಾನೇ ಬಂಡೀಪುರದ ಸಿಎಫ್ ರಮೇಶ್‍ಕುಮಾರ್‍ರವರು ಪ್ರತಿಕ್ರಿಯಿಸಿದ್ದರು. ಮೋದಿ ಅವರು ಬಂಡೀಪುರಕ್ಕೆ ಭೇಟಿ ಕೊಡುವ ಸಾಧ್ಯತೆ ಇರುವುದರಿಂದ ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಹಾಗೆ ಆನೆ ಉಳಿಸಿದ ಸಿಬ್ಬಂದಿಗೆ ಸ್ಮರಣಿಕೆ ನೀಡುವುದರ ಜೊತೆಗೆ ವಿಶೇಷ ಕಾರ್ಯಕ್ರಮ ಹಮ್ಮಿಕೋಳ್ಳುವ ಬಗ್ಗೆ ಯೋಜಿಸಲಾಗುತ್ತಿದೆ ಎಂದಿದ್ದರು.
ಅತಿ ಹೆಚ್ಚು ಹುಲಿಗಳಿರುವ ಸಂರಕ್ಷಿತ ಪ್ರದೇಶ ಬಂಡೀಪುರ: 1973 ರಲ್ಲಿ ಪ್ರಾಜೆಕ್ಟ್ ಟೈಗರ್ ಘೋಷಿಸಿದ್ದು, ಯೋಜನೆಯಲ್ಲಿ ಬಂಡೀಪುರವೂ ಸೇರಿದೆ. ಇದರ ಜೊತೆಗೆ, ಕರ್ನಾಟಕದಲ್ಲೇ ಅತಿ ಹೆಚ್ಚು ಹುಲಿಗಳಿರುವ ಸಂರಕ್ಷಿತ ಪ್ರದೇಶವೂ ಇದಾಗಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ತಮಿಳುನಾಡಿನ ಮಧುಮಲೈ ಮತ್ತು ಕೇರಳದ ವಯನಾಡು ಅರಣ್ಯ ಪ್ರದೇಶದಗಡಿ ಹೊಂದಿದ್ದು, 1973ರಲ್ಲಿ ಹುಲಿ ಯೋಜನೆ ಘೋಷಿಸಿದ ವೇಳೆ ಕೇವಲ 10-15 ಹುಲಿಗಳಿದ್ದವು. ಈಗ ಇರುವ ಮಾಹಿತಿಗಳ ಪ್ರಕಾರ ಅವುಗಳ ಸಂಖ್ಯೆ 150 ದಾಟಿದೆ. ಇನ್ನು ಪ್ರಧಾನಿ ಮೋದಿಯವರು ಇಲ್ಲಿ ಬಂದು ಸಫಾರಿ ಮಾಡಿದರೆ ಮರೆಂiÀiಲಾರದಂತ ನೆನಪಿನ ಕ್ಷಣವಾಗಿರಲಿದೆ ಎಂಬುದು ಅರಣ್ಯಾಧಿಕಾರಿಗಳ ಮಾತಾಗಿದೆ.