ಬಂದರವಾಡ ಶಾಲೆಯಲ್ಲಿ ಉಪನ್ಯಾಸ

ಅಪಜಲಪೂರ,ಜು 3: ತಾಲೂಕಿನ ಬಂದರವಾಡ ಗ್ರಾಮ ಪಂಚಾಯತಿ ಹಾಗೂ ಮಲ್ಲಬಾದದ ಸಾಮ್ರಾಟ್ ಅಶೋಕ ಚಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ 2023 – 24ನೇ ಸಾಲಿನ ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ಐಇಸಿ ಚಟುವಟಿಕೆಗಳ ಕುರಿತು ಬಂದರವಾಡ ಸರಕಾರಿ ಪ್ರೌಢ ಶಾಲೆಯಲ್ಲಿ ಉಪನ್ಯಾಸ ಹಾಗೂ ಪ್ರಮಾಣ ವಚನ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು, ಗ್ರಾಂ.ಪಂ. ಸಿಬ್ಬಂದಿ ವರ್ಗದವರು ಹಾಗೂ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಸಿಬ್ಬಂದಿ ವರ್ಗದವರು ಸೇರಿದಂತೆ ಅನೇಕರಿದ್ದರು.