(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು,ಸೆ.೨೪:ಸೆಪ್ಟೆಂಬರ್ ೨೬ರ ಬೆಂಗಳೂರು ಬಂದ್‌ಗೆ ಬಿಜೆಪಿ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತ ಪರ ಸಂಘಟನೆಗಳು ಕರೆ ನೀಡಿರುವ ಸೆ. ೨೬ರ ಬೆಂಗಳೂರು ಬಂದ್‌ಗೆ ಬಿಜೆಪಿ ಬೆಂಬಲವಿದೆ, ಇದಕ್ಕೆ ನಮ್ಮ ವಿರೋಧವಿಲ್ಲ ಎಂದರು.ಜೆಡಿಎಸ್ ಯುವ ಮುಖಂಡ ನಿಖಿಲ್‌ಕುಮಾರಸ್ವಾಮಿ ಅವರು ಇಂದು ತಮ್ಮನ್ನು ಭೇಟಿಯಾಗಿದ್ದು ಸೌಹಾರ್ದಯುತ ಭೇಟಿ ಅಷ್ಟೆ ಎಂದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದೂರವಾಣಿ ಕರೆ ಮಾಡಿದ್ದರು. ನಮ್ಮ ಮನೆಗೆ ಬಂದು ಹೋಗಿ ಎಂದು ಆಹ್ವಾನಿಸಿದ್ದಾರೆ. ಸದ್ಯದಲ್ಲೇ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತೇನೆ. ಹೇಗೋ ಜೆಡಿಎಸ್ ಜತೆ ಬಿಜೆಪಿ ಮೈತಿಯಾಗಿದೆ. ನಾವೆಲ್ಲರೂ ಒಟ್ಟಾಗಿ ಹೋಗಬೇಕಾಗಿದೆ ಎಂದರು.