ಬಂದ್ ಮಾಡದೆ ವ್ಯಾಪಾರ: ೩೦ ಅಂಗಡಿಗಳಿಗೆ ದಂಡ

ಉಡುಪಿ, ಎ.೨೮- ಜಿಲ್ಲಾಡಳಿತದ ಆದೇಶದ ನಡುವೆಯೂ ಉಡುಪಿ ನಗರದಲ್ಲಿ ವ್ಯಾಪಾರ ನಡೆಸುತ್ತಿದ್ದ ಕೆಲವು ಅಂಗಡಿಗಳಿಗೆ ನಗರಸಭೆ ಅಧಿಕಾರಿಗಳ ತಂಡ ನಿನ್ನೆ ದಾಳಿ ನಡೆಸಿ ದಂಡ ವಿಧಿಸಿದೆ.

ನಿನ್ನೆ ಬೆಳಗ್ಗೆಯಿಂದ ಸಂಜೆಯವರೆಗೆ ರಥಬೀದಿ, ಮಸೀದಿ ರಸ್ತೆ, ಕೆಎಂ ಮಾರ್ಗ, ಮಣಿಪಾಲದಲ್ಲಿ ವ್ಯಾಪಾರ ನಡೆಸುತ್ತಿದ್ದ ಬಟ್ಟೆ ಸೇರಿದಂತೆ ಇತರ ಸುಮಾರು ೩೦ ಅಂಗಡಿಗಳಿಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ, ೮೦,೫೦೦ ರೂ. ದಂಡ ವಸೂಲಿ ಮಾಡಿದೆ. ಅಗತ್ಯ ವಸ್ತುಗಳ ಹೊರತು ಪಡಿಸಿ ಉಳಿದಂತೆ ಯಾವುದೇ ಅಂಗಡಿಗಳು ತೆರೆಯದಂತೆ ಈಗಾಗಲೇ ಜಿಲ್ಲಾಡಳಿತ ಆದೇಶ ನೀಡಿದ್ದು, ಆದರೂ ಕೆಲವೊಂದು ಅಂಗಡಿಯವರು ವ್ಯಾಪಾರ ನಡೆಸುತ್ತಿರುವುದು ಕಂಡುಬಂದಿದೆ. ಅದರಂತೆ ದಾಳಿ ನಡೆಸಿ, ಕನಿಷ್ಠ ೨೦೦೦ರೂ.ನಿಂದ ಗರಿಷ್ಠ ೧೦ಸಾವಿರ ರೂ.ವರೆಗೆ ದಂಡ ವಿಧಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಡಾ.ಉದಯ ಶೆಟ್ಟಿ ತಿಳಿಸಿದ್ದಾರೆ.