
ಧಾರವಾಡ,ಮಾ.18: ಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ ಖಂಡಿಸಿ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಧಾರವಾಡ ಪತ್ರಕರ್ತರು
ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು ಇಲ್ಲವೇ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ, ಪತ್ರಕರ್ತ ನಾಗರಾಜ ಕಿರಣಗಿ, ಜಾವೇದ್ ಆದೋನಿ, ವಾಸೀಂ ಭಾವಿಮನಿ ಸೇರಿದಂತೆ ಹಲವರು ಇದ್ದರು.