ಬಕ್ರೀದ್ ಹಬ್ಬ ಶಾಂತಿಯುತವಾಗಿ ಆಚರಿಸಿ : ಸಿಪಿಐ ವಿನಾಯಕ

ಕಾಳಗಿ. ಜೂ.26 : ಕಾನೂನು ಸುವ್ಯವಸ್ಥೆ ಕಾಪಾಡಲು ಪೆÇಲೀಸ್ ಇಲಾಖೆ ಸದಾ ಸಿದ್ಧವಾಗಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತತೆಯಿಂದ ಹಬ್ಬ ಆಚರಿಸಬೇಕು ಎಂದು ಸಿಪಿಐ ವಿನಾಯಕ ಹೇಳಿದರು.

ಪಟ್ಟಣದ ಪೆÇಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಪೆÇಲೀಸ್ ಇಲಾಖೆ ಸದಾ ಸಿದ್ಧವಾಗಿರುತ್ತದೆ. ಹಿಂದೂ-ಮುಸ್ಲಿಮರು ಒಟ್ಟಾಗಿ ಶಾಂತಿಯಿಂದ ಹಬ್ಬ ಆಚರಿಸಿ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ, ತಕ್ಷಣ ಪೆÇಲೀಸರಿಗೆ ಮಾಹಿತಿ ನೀಡಬೇಕು ಎಂದರು.

ಈ ಹಿಂದಿನಿಂದಲೂ ಪಟ್ಟಣದ ಎಲ್ಲಾ ಮಸೀದಿಗಳಲ್ಲಿ ಶಾಂತಿ ಸೌಹಾರ್ದತೆಯಿಂದ ಹಬ್ಬಗಳು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲೂ ಕೂಡ ಇದೇ ಸಂಸ್ಕøತಿ ಮುಂದುವರಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆಗೆ ತೆರಳುವಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಹೋಗುವಂತೆ ಸಲಹೆ ನೀಡಿದರು.

ಪಿಎ??? ಹುಲಿಯಪ್ಪ ಗೌಡಗೊಂಡ, ರಾಘವೇಂದ್ರ ಗುತ್ತೇದಾರ, ಶೇಖರ ಪಾಟೀಲ ರವಿದಾಸ ಪತಂಗೆ, ಶಿವಶರಣಪ್ಪ ಗುತ್ತೇದಾರ, ಕಾಳಶೆಟ್ಟಿ ಪಡಶೆಟ್ಟಿ, ಶಿವಕುಮಾರ ಕಮಲಾಪುರ, ದತ್ತು ಗುತ್ತೇದಾರ, ಪರಮೇಶ್ವರ ಕಟ್ಟಿಮನಿ, ವಿಠ್ಠಲ್ ಸೇಗಾಂವಕರ್, ಮುನೀರ ಬೇಗ್ ಬಿಜಾಪುರ, ರೇವಣಸಿದ್ಧ ಕಲಶೆಟ್ಟಿ ಸೇರಿದಂತೆ ಅನೇಕರಿದ್ದರು.