ಬಗರ್ ಹುಕುಂ ಸಕ್ರಮೀಕರಣ ಸಮಿತಿ ರಚನೆ

ಕಲಬುರಗಿ:ನ.17: ಜಿಲ್ಲೆಯ ಅಫಜಲಪುರ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚನೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅಫಜಲಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ವೈ.ಪಾಟೀಲ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದಕ್ಕೆ ಪೂರಕವಾಗಿ ಸಾಮಾನ್ಯ ವರ್ಗದ ಸದಸ್ಯರಾಗಿ ಅರ್ಜುಣಗಿಯ ಚಾಂದ್‍ಬಾಷಾ ಬಿನ್ ಖಮರುದ್ದೀನ್ ಶೇಖ್, ಪರಿಶಿಷ್ಟ ಜಾತಿಯ ಸದಸ್ಯರಾಗಿ ಹಸರಗುಂಡಗಿಯ ಚಂದಪ್ಪ ಬಿನ್ ಲಕ್ಕಪ್ಪ ಕಟ್ಟಿಮನಿ, ಮಹಿಳಾ ಸದಸ್ಯೆಯಾಗಿ ತಾಲೂಕಿನ ಅನಸೂಯ ಮಹೇಶ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದ್ದು, ಅಫಜಲಪುರದ ತಹಸೀಲ್ದಾರ್ ಅವರನ್ನು ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಕಂದಾಯ ಇಲಾಖೆಯ (ಭೂ ಮಂಜೂರಾತಿ-3) ಸರಕಾರದ ಅಧೀನ ಕಾರ್ಯದರ್ಶಿ ಕೆ.ಪಿ.ಹೇಮಂತರಾಜು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಪ್ರಕರಣ 94(ಎ)1ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.