ಬಗುರ್ ಹುಕ್ಕಂ ಸಾಗುವಳಿ ಸಕ್ರಮೀಕರಣ ಸಭೆ


ಸಂಜೆವಾಣಿ ವಾರ್ತೆ
ಸಿರುಗುಪ್ಪ, ಜು.31: ನಗರದ ತಹಶೀಲ್ದಾರ್ ಕಛೇರಿಯಲ್ಲಿ ಶಾಸಕರ ನೇತೃತ್ವದಲ್ಲಿ ತಾಲೂಕಿನ ಹೊನ್ನರಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಬಗುರ್ ಹುಕ್ಕಂ ಸಾಗುವಳಿ ಸಕ್ರಮೀಕರಣ ಸಭೆ ನಡೆಯಿತು.
ಶಾಸಕ ಎಂ.ಎಸ್.ಸೋಮಲಿಂಗಪ್ಪ ಮಾತನಾಡಿ ತಾಲೂಕಿನ ಹೊನ್ನರಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಬಗುರ್ ಹುಕ್ಕಂ ಸಾಗುವಳಿದಾರರು ಅರ್ಜಿಗಳನ್ನು ಸಲ್ಲಿಸಿದ್ದರು ತಹಶೀಲ್ದಾರ ಸೇರಿದಂತೆ ಇತರೆ ಅಧಿಕಾರಿಗಳ ಮಧ್ಯ ಅರ್ಜಿಗಳನ್ನು ಪರಿಶೀಲಿಸಲಾಗಿದೆ. ಒಟ್ಟು 17 ಅರ್ಜಿಗಳನ್ನು ಪೂರ್ತಿಗೊಳಿಸಲಾಗಿದೆ ಎಂದು ತಿಳಿಸಿದರು.
ತಹಶೀಲ್ದಾರ್ ಎನ್.ಆರ್.ಮಂಜುನಾಥ ಸ್ವಾಮಿ ಮತ್ತು ಇತರೆ ಅಧಿಕಾರಿಗಳು ಇದ್ದರು.

Attachments area