ಬಚ್ಚಬೋರನಹಟ್ಟಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ನ.೨; ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದಲ್ಲಿ  ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.ಗ್ರಾಮದ ಕಣಿವೆ ಮಾರಮ್ಮ ದೇಗುಲದ ಮುಂಭಾಗದಲ್ಲಿರುವ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಗ್ರಾಮಸ್ಥರು ಪುಷ್ಪನಮನ ಸಲ್ಲಿಸಿದರು. ಜಯಂತಿ ಅಂಗವಾಗಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.ಈ ಸಂದಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಅನಿತಾ ಬಸವರಾಜ್, ಗಂಗಮ್ಮ ಪಾಪಣ್ಣ, ಕೆ.ಬಿ.ಕೃಷ್ಣಮೂರ್ತಿ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಇದ್ದರು.