ಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್ ಮೂರ್ಖತನ ಮಾಡಿದೆ

ದಾವಣಗೆರೆ.ಮೇ.೫; ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೇಯ ವಾತಾವರಣ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.ದಾವಣಗೆರೆಯ ಜಿಎಂಐಟಿ ಗೆಸ್ಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರುಈ ಬಾರಿಯೂ  ನೂರರಕ್ಕೆ ನೂರಷ್ಟು ನಾವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರುತ್ತೇವೆ.ಸುಮಾರು 135 ಸೀಟು ಗೆದ್ದು ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರುತ್ತೇವೆ.ಯಾರ ಜೊತೆ ಹೊಂದಾಣಿಕೆಯ ಪ್ರಶ್ನೇಯೆ ಇಲ್ಲ ಎಂದರು.ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಅಂಶಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರುಬಜರಂಗದಳ ವಿಚಾರದಲ್ಲಿ ಕಾಂಗ್ರೆಸ್ ಮೂರ್ಖತನ ಮಾಡಿದೆ.ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಶಾಸ್ತಿ ಆಗುತ್ತದೆ ಎಂದರು.ರಾಜ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತಾ ಷಾ ರೋಡ್ ಶೋ ನಂತರ ವಾತವರಣ ಸಂಪೂರ್ಣವಾಗಿ ಬದಲಾಗಿದೆ.ಬಿಜೆಪಿಗೆ ಮತ್ತಷ್ಟು ಬಲ ಬಂದಿದೆ. ಸ್ವತಂತ್ರ ಸರ್ಕಾರ ರಚನೆ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.ಈ ವೇಳೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಲೋಕಿಕೆರೆ ನಾಗರಾಜ್, ದಕ್ಷಿಣ ಅಭ್ಯರ್ಥಿ ಬಿ.ಜಿ ಅಜಯ್ ಕುಮಾರ್,ಮುಖಂಡರಾದ ಬಿ.ಎಂ ಸತೀಶ್,ಪಿ.ಸಿ ಶ್ರೀನಿವಾಸ್ ಮತ್ತಿತರರಿದ್ದರು.